ವೀರೇಂದ್ರ ಹೆಗ್ಗಡೆಯವರ ಒಳ್ಳೆ ಕೆಲಸ ಕಾಣಿಸುತ್ತಿಲ್ಲವೇ?: ಅಪಪ್ರಚಾರದ ವಿರುದ್ಧ ವಚನಾನಂದ ಶ್ರೀಗಳ ಆಕ್ರೋಶ

Date:

spot_img

ಹಾವೇರಿ : ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು. ಕೆಲವು ಶಕ್ತಿಗಳು ಹಿಂದುತ್ವಕ್ಕೆ ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಹಾನಿ ಮಾಡಲು ಪಿತೂರಿ ನಡೆಸುತ್ತಿವೆ ಎಂದು ಅವರು ಆರೋಪಿಸಿದರು.

ಪಿತೂರಿಗಳ ವಿರುದ್ಧ ಹಿಂದೂಗಳು ಒಂದಾಗಬೇಕು

“ಕೆಲವರಿಗೆ ಹಿಂದುತ್ವವು ಬೆಳೆಯುತ್ತಿರುವುದು ಮತ್ತು ಇಡೀ ಜಗತ್ತು ಹಿಂದೂ ಧರ್ಮವನ್ನು ಒಪ್ಪಿಕೊಳ್ಳಬಹುದು ಎಂಬ ಭಯ ಕಾಡುತ್ತಿದೆ. ಅದಕ್ಕಾಗಿ ಧಾರ್ಮಿಕ ಸಂಸ್ಥೆಗಳು, ದೇಗುಲಗಳಿಗೆ ಕೆಟ್ಟದ್ದು ಮಾಡಬೇಕೆಂದು ಪಿತೂರಿ ಮಾಡುತ್ತಿದ್ದಾರೆ” ಎಂದು ಸ್ವಾಮೀಜಿ ಹೇಳಿದರು. “ಇವತ್ತು ವೀರೇಂದ್ರ ಹೆಗ್ಗಡೆಯವರಿಗೆ ಬಂದಿರಬಹುದು, ನಾಳೆ ನಮಗೂ ಬರಬಹುದು. ನಾವೆಲ್ಲರೂ ಒಂದಾಗಬೇಕಿದೆ” ಎಂದು ಪಕ್ಕದ ಮನೆಯ ಬೆಂಕಿಯ ಹೋಲಿಕೆ ನೀಡಿ ಎಚ್ಚರಿಕೆ ನೀಡಿದರು. ಏನಾದರೂ ತಪ್ಪುಗಳಿದ್ದರೆ ಅದನ್ನು ಕಾನೂನು ಮತ್ತು ನ್ಯಾಯಾಲಯ ನಿರ್ಧರಿಸುತ್ತದೆ, ನಾವಲ್ಲ ಎಂದೂ ಅವರು ತಿಳಿಸಿದರು.

ಹೆಗ್ಗಡೆಯವರ ಒಳ್ಳೆ ಕೆಲಸಗಳು ಕಾಣಿಸುತ್ತಿಲ್ಲವೇ?

ವೀಂದ್ರ ಹೆಗ್ಗಡೆಯವರು ಗ್ರಾಮೀಣಾಭಿವೃದ್ಧಿಗಾಗಿ ಮಾಡುತ್ತಿರುವ ಉತ್ತಮ ಕಾರ್ಯಗಳನ್ನು ಸ್ವಾಮೀಜಿ ಶ್ಲಾಘಿಸಿದರು. “ಒಳ್ಳೆಯ ಕೆಲಸಗಳನ್ನು ಬಿಟ್ಟು, ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ನಡೆದಿದೆ. ಅವರ ಒಳ್ಳೆಯ ಕಾರ್ಯಗಳನ್ನು ಪ್ರೋತ್ಸಾಹಿಸುವ ಬದಲು ಅಪಖ್ಯಾತಿ ತರುವ ಮತ್ತು ನಕಾರಾತ್ಮಕವಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ. ನಾವು ಅವರೊಂದಿಗೆ ನಿಲ್ಲಬೇಕು” ಎಂದು ಹೇಳಿದರು.

ಜೈನರು ಹಿಂದೂ ಧರ್ಮದ ಭಾಗ: ವಿದೇಶಿ ನಿಧಿಗಳ ಬಗ್ಗೆ ಅನುಮಾನ

ಯಾವುದೇ ಜೈನರು ತಾವು ಹಿಂದೂಗಳಲ್ಲ ಎಂದು ಎಂದಿಗೂ ಹೇಳಿಲ್ಲ. ಜೈನರು ಹಾಲಿನಲ್ಲಿ ಬೆರೆತ ಕಲ್ಲುಸಕ್ಕರೆಯಂತೆ ಹಿಂದೂಗಳ ಜೊತೆಗಿದ್ದಾರೆ. ಅವರು ಎಂದಿಗೂ ನಮ್ಮ ಪರಂಪರೆಯನ್ನು ಟೀಕಿಸಿಲ್ಲ ಎಂದು ವಚನಾನಂದ ಸ್ವಾಮೀಜಿ ಸ್ಪಷ್ಟಪಡಿಸಿದರು. ಜೊತೆಗೆ, ಅಲ್ ಜಜೀರಾ ಚಾನೆಲ್‌ನಲ್ಲಿಯೂ ಈ ಕುರಿತು ವರದಿ ಬರುತ್ತಿರುವುದು ಶಂಕೆಯನ್ನು ಹುಟ್ಟುಹಾಕಿದೆ. ಇದಕ್ಕೆ ಯಾರು ಹಣಕಾಸು ಒದಗಿಸುತ್ತಿರಬಹುದು ಎಂದು ಪ್ರಶ್ನಿಸಿದ ಅವರು, “ಅಖಂಡ ಸನಾತನ ತತ್ವಗಳ ವಿರುದ್ಧ ಮೂಲಭೂತವಾದವನ್ನು ಬೆಂಬಲಿಸುವ ಯೂಟ್ಯೂಬರ್‌ಗಳನ್ನು ನಿರ್ಲಕ್ಷಿಸಬೇಕು” ಎಂದು ಕರೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.