ನಾಸೀರ್ ಜೊತೆ ಸಂಪರ್ಕ: ಎಎಸ್‌ಐ ಚಾಂದ್ ಪಾಷಾ ಸೇರಿ ಮೂವರು ಎನ್‌ಐಎ ಕಸ್ಟಡಿಗೆ – ತನಿಖೆ ತೀವ್ರ!

Date:

spot_img

ಬೆಂಗಳೂರು: ನಗರದಲ್ಲಿ ನಡೆದ ಎನ್‌ಐಎ ದಾಳಿಗಳಲ್ಲಿ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಸಹಾಯಕ ಸಬ್‌ ಇನ್ಸ್‌ಪೆಕ್ಟರ್ (ಎಎಸ್‌ಐ) ಚಾಂದ್ ಪಾಷಾ, ಅನೀಸ್ ಫಾತಿಮಾ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್ ಬಂಧಿತರು. ಎನ್‌ಐಎ ಅಧಿಕಾರಿಗಳು ಈ ಮೂವರನ್ನು ಬುಧವಾರ ಎನ್‌ಐಎ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ಜುಲೈ 14ರವರೆಗೆ ಎನ್‌ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಂಧಿತರು ದಕ್ಷಿಣ ಭಾರತದಲ್ಲಿ ನಡೆದ ಹಲವು ಸ್ಫೋಟಗಳ ಮಾಸ್ಟರ್‌ಮೈಂಡ್ ಆಗಿರುವ ನಾಸೀರ್‌ನೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಮಹತ್ವದ ಸುಳಿವು ಎನ್‌ಐಎಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಮುಂದಿನ ಆರು ದಿನಗಳ ಕಾಲ ವಿಚಾರಣೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ಉಗ್ರ ನಾಸೀರ್, ಕೊಲೆ ಪ್ರಕರಣದಲ್ಲಿ ಪರಿಚಿತನಾಗಿದ್ದ ಯುವಕರ ತಂಡವೊಂದನ್ನು ಕಟ್ಟಿದ್ದ. ಈ ತಂಡದಲ್ಲಿ ಜುನೇದ್, ಮೊಹಮ್ಮದ್ ಹರ್ಷದ್ ಖಾನ್, ಸುಹೇಲ್, ಫೈಜಲ್, ಜಾಹಿದ್ ತಬ್ರೇಜ್ ಮತ್ತು ಮುದಾಸಿರ್ ಇದ್ದರು. ಈ ತಂಡವು ಗ್ರೆನೇಡ್‌ಗಳು, ಪಿಸ್ತೂಲ್‌ಗಳು ಮತ್ತು ಸ್ಫೋಟಕ ವಸ್ತುಗಳೊಂದಿಗೆ ಬೆಂಗಳೂರಿನ ಆರ್.ಟಿ.ನಗರ ಮತ್ತು ಹೆಬ್ಬಾಳದಲ್ಲಿ ಸಿಕ್ಕಿಬಿದ್ದಿತ್ತು. ಪ್ರಸ್ತುತ ಪ್ರಮುಖ ಆರೋಪಿ ಜುನೈದ್‌ಗಾಗಿ ಎನ್‌ಐಎ ಹುಡುಕಾಟ ನಡೆಸುತ್ತಿದ್ದು, ಈತನನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ವೇಳೆ ಡಾ. ನಾಗರಾಜ್, ಚಾಂದ್ ಪಾಷಾ ಮತ್ತು ಅನೀಸ್ ಫಾತಿಮಾ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ