
ದೆಹಲಿ: ಹಲವು ರಾಜ್ಯಗಳ ವಿರೋಧ ಹಾಗೂ ಸಾರ್ವಜನಿಕ ವಾದಗಳ ನಡುವೆಯೂ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಬಹುಮತದಿಂದ ಅಂಗೀಕೃತವಾಗಿದೆ. ಆದರೆ ಈ ಬೆನ್ನಲ್ಲೇ ಕೆಲವು ರಾಜ್ಯಗಳು ತಮ್ಮ ರಾಜ್ಯಗಳಲ್ಲಿ ಈ ತಿದ್ದುಪಡಿ ಮಸೂದೆಯನ್ನು ಜಾರಿ ಮಾಡುವುದಿಲ್ಲ ಎಂದು ಘೋಷಿಸಿವೆ.
ಇದರ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಕೂಡ ಕ್ರಮಕ್ಕಿಳಿದಿದ್ದು, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರ ನೇಮಕಕ್ಕೆ ಸಂಬಂಧಿಸಿದ ನಿಯಮವನ್ನು ಪ್ರಶ್ನಿಸಿದೆ. ನ್ಯಾಯಮೂರ್ತಿಗಳು, “ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರಿಗೆ ಸರ್ಕಾರ ಅವಕಾಶ ನೀಡುತ್ತದೆಯೆ?” ಎಂಬ ಗಂಭೀರ ಪ್ರಶ್ನೆ ಮೂಲಕ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮತ್ತೊಂದೆಡೆ, ಬಳಕೆದಾರರ ಆಸ್ತಿ ಉಪಯೋಗದ ಕುರಿತ ಹೊಸ ನಿಯಮಗಳಲ್ಲಿಯೂ ಅನೇಕ ಅಸ್ಪಷ್ಟತೆಗಳಿವೆ ಎಂಬ ಆಕ್ಷೇಪ ಕೇಳಿಬಂದಿದ್ದು, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ ಕೋರಿದೆ.