
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಅಮಾನವೀಯ ಕೃತ್ಯದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡ ಕುಟುಂಬಗಳಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ “ಎಂದು ಹೇಳಿದರು.