‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

Date:

spot_img

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್‌

ಜೆಪಿ ತುಮಿನಾಡಿ ನಿರ್ದೇಶನದ ಈ ಚಿತ್ರ ತನ್ನ ವಿಭಿನ್ನ ಕಥಾವಸ್ತು ಮತ್ತು ಹಾಸ್ಯದಿಂದಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಕನ್ನಡ ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಕಮಾಲ್ ಮಾಡಿದ್ದ ಈ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ.ಗೂ ಅಧಿಕ ಗಳಿಕೆ ಕಾಣುವ ಮೂಲಕ ಬ್ಲಾಕ್‌ಬಸ್ಟರ್ ಪಟ್ಟಿಗೆ ಸೇರಿತ್ತು.

ಒಟಿಟಿ ಅವಧಿಯಲ್ಲಿ ಕಡಿತದ ಚರ್ಚೆ

ಚಿತ್ರವು ಒಟಿಟಿಗೆ ಬಂದ ನಂತರ ರನ್‌ಟೈಮ್‌ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಚಿತ್ರಮಂದಿರಗಳಲ್ಲಿ 2 ಗಂಟೆ 17 ನಿಮಿಷಗಳಿದ್ದ ಚಿತ್ರದ ಅವಧಿ, ಒಟಿಟಿಯಲ್ಲಿ 2 ಗಂಟೆ 10 ನಿಮಿಷಕ್ಕೆ ಇಳಿದಿರುವುದು ವರದಿಯಾಗಿದೆ. ಈ ವ್ಯತ್ಯಾಸದಿಂದಾಗಿ, ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆಯೇ ಎಂಬ ಕುತೂಹಲ ಮೂಡಿದೆ. ಆದರೆ, ಚಿತ್ರದ ಕೊನೆಯಲ್ಲಿ ಬರುವ ಧನ್ಯವಾದಗಳು ಹಾಗೂ ಕ್ರೆಡಿಟ್‌ಗಳನ್ನು ಮಾತ್ರ ತೆಗೆದುಹಾಕಲಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ.

ರಾಜ್ ಬಿ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅದರ ಜತೆ ಅವರು ಗುರೂಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ ಮತ್ತು ಸಂಧ್ಯಾ ಅರಕೆರೆ ಸೇರಿದಂತೆ ಹಲವು ನಟರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.