ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎನ್‌ಐಎ ತನಿಖೆಗೆ ನಮ್ಮ ವಿರೋಧವಿಲ್ಲ – ಸ್ಪೀಕರ್ ಖಾದರ್

Date:

spot_img

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ವಿರೋಧವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಬಿಜೆಪಿ ಈ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಒತ್ತಾಯಿಸುತ್ತಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಮಾತನಾಡಿದ ಅವರು, “ಸರ್ಕಾರ ತನಿಖೆಯ ಬಗ್ಗೆ ಯಾವ ಸಂಸ್ಥೆ ತನಿಖೆ ನಡೆಸಬೇಕೆಂದು ತೀರ್ಮಾನ ಮಾಡಲಿ. ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ತಪ್ಪಿಸಿಕೊಳ್ಳದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ನಡೆಯಬೇಕು” ಎಂದು ಸ್ಪಷ್ಟಪಡಿಸಿದರು.

“ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಸ್ತ್ರ ಶಿಕ್ಷೆ ಅನಿವಾರ್ಯ. ಯಾರಿಗೂ ಕೊಲೆ ಮಾಡುವ ಹಕ್ಕಿಲ್ಲ. ಎಲ್ಲ ರೀತಿಯ ತನಿಖೆ ನಡೆಯಬೇಕು. ಪೊಲೀಸರು ಸೂಕ್ತ ವರದಿ ಸಲ್ಲಿಸಬೇಕು. ತಪ್ಪು ಮಾಡಿದವರ ಬೆಂಬಲಗಾರನಾಗಿ ನಾನಿಲ್ಲ. ನನಗೆ ಸಿಕ್ಕ ಮಾಹಿತಿಯನ್ನು ಜನರ ಮುಂದೆ ಬಿಟ್ಟಿದ್ದೇನೆ. ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಅಗತ್ಯ.”ಎಂದು ಅವರು ತಿಳಿಸಿದರು.

ರಾಜಕೀಯ ಟೀಕೆಗಳಿಗೆ ಖಾದರ್ ಉತ್ತರ:
“ನನ್ನ ಮೇಲೆ ಟೀಕೆ ಮಾಡುವುದು ಹೊಸ ವಿಷಯವಲ್ಲ. ದೇವರ, ಜನರ ಆಶೀರ್ವಾದ ನನ್ನ ಜೊತೆ ಇದೆ. ಕ್ರಿಕೆಟ್ ಪಂದ್ಯದಲ್ಲಿ ನಾನು ಹಾಜರಾಗಲಿಲ್ಲ ಎಂಬ ಆರೋಪದ ವಿಚಾರವನ್ನೂ ನಾನು ಸ್ಪಷ್ಟಪಡಿಸಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯ ವಾತಾವರಣ ಇರಬೇಕೆಂಬುದೇ ನನ್ನ ಆಶಯ” ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.