ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯ ಮೂಲದ ವಿದ್ಯಾರ್ಥಿ ನಂದನ ಎಸ್. ಭಟ್ ಕಾಲು ಜಾರಿ ಬಿದ್ದು ಮೃತ್ಯು

Date:

spot_img

ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯ ಮೂಲದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಮಾರಿಷಸ್ ದೇಶದಲ್ಲಿ ಸಂಭವಿಸಿದೆ.

ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತ ವಿದ್ಯಾರ್ಥಿ.

ನಂದನ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿ ‘ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ’ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆ ನಿನ್ನೆ (ಅ. 13) ನಡೆದಿದ್ದು, ಜಲಪಾತ ವೀಕ್ಷಣೆಗೆ ತೆರಳಿದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಮೃತದೇಹ ತರಲು ಮನವಿ

ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು, ಮೃತದೇಹವನ್ನು ಮಾರಿಷಸ್ ಸರ್ಕಾರದ ವ್ಯವಸ್ಥೆ ಹಾಗೂ ಭಾರತ ಸರ್ಕಾರದ ಸಹಾಯದಿಂದ ಸ್ವದೇಶಕ್ಕೆ ಕರೆತರಲು ವ್ಯವಸ್ಥೆ ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

ಮನವಿಗೆ ಸ್ಪಂದಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು, ತಕ್ಷಣವೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಸಹ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ ಅಗತ್ಯ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ