
ಬಾಗಲಕೋಟ: ಬೇಸಿಗೆ ಕಾಲ ಆರಂಭವಾಗುವ ಮುನ್ನವೇ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್. ಈ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಜಾರ್ಜ್ ಖಚಿತಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ರಾಜ್ಯದಲ್ಲಿ ಈಗಾಗಲೇ ಬರ ಪರಿಸ್ಥಿತಿ ಇದ್ದರೂ ಲೋಡ್ ಶೆಡ್ಡಿಂಗ್ ಮಾಡಿಲ್ಲ, ಈ ಬಾರಿ ಬೇಸಿಗೆಯಲ್ಲೂ ವಿದ್ಯುತ್ ಕಡಿತ ಮಾಡುವುದಿಲ್ಲ, ವಿದ್ಯುತ್ ಕೊರತೆಯಿದ್ದರೂ ಇತರ ಮೂಲಗಳಿಂದ ಖರೀದಿಸಲು ವ್ಯವಸ್ಥೆ ಮಾಡಲಾಗುವುದು.
ಈ ಬಾರಿ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ 16-17 ಸಾವಿರ ಮೆಗಾವ್ಯಾಟ್ ಮಟ್ಟದಲ್ಲಿದ್ದು, ಸರ್ಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ.