ಬಾಹ್ಯಾಕಾಶದಲ್ಲಿ 286 ದಿನ ಕಳೆದು ಸುನೀತಾ, ಬುಚ್ ಭೂಮಿಗೆ ಮರಳಿದ ಕ್ಷಣ

Date:

spot_img

ಫ್ಲೋರಿಡಾ (ಅಮೆರಿಕ): ಸುಮಾರು 9 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಲ್ಲಿ ಕಳೆದ ಬಳಿಕ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಸ್ಕೋರ್ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಬುಧವಾರ (ಮಾ.19) ಬೆಳಗಿನ ಜಾವ 3.27ರ ಸುಮಾರಿಗೆ ಸ್ಪೇಸ್ ಎಕ್ಸ್‌ನ ಕ್ರೂ ಡ್ರಾಗನ್ ನೌಕೆಯು ಪ್ಯಾರಚೂಟ್ ಮೂಲಕ ಅಮೆರಿಕದ ಫ್ಲೋರಿಡಾದ ಸಮುದ್ರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಯಿತು. ಬಳಿಕ ನಾಸಾ ತಂಡವು ಗಗನಯಾತ್ರಿಗಳನ್ನು ಸಮುದ್ರದಿಂದ ಮೇಲಕ್ಕೆತ್ತಿ, ಆರೋಗ್ಯ ಪರೀಕ್ಷೆಗೆ ಕರೆದೊಯ್ಯಲಾಯಿತು.

9 ತಿಂಗಳ ಸಮಯದಲ್ಲಿ 286 ದಿನಗಳ ಕಾಲ ISS ನಲ್ಲಿ ಉಳಿದುಕೊಂಡಿದ್ದರು.4,577 ಬಾರಿ ಭೂಮಿಗೆ ಸುತ್ತು ಕೊಟ್ಟಿದ್ದರು. ಒಟ್ಟು 195.2 ಮಿಲಿಯನ್ ಕಿಮೀ ದೂರ ಹಾರಾಟ ಮಾಡಿದ್ದರು.

ಅಪರೂಪದ ಸನ್ನಿವೇಶ:
2023ರ ಜೂನ್ 5ರಂದು ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ ಸುನೀತಾ ಹಾಗೂ ಬುಚ್ ವಿಸ್ಕೋರ್ ನೌಕೆಯಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ISSನಲ್ಲೇ ಉಳಿಯಬೇಕಾದ ಪರಿಸ್ಥಿತಿ ಎದುರಿಸಿದ್ದರು. ತಾಂತ್ರಿಕ ಸಮಸ್ಯೆ ನಿವಾರಣೆಯಾಗುವವರೆಗೂ ಅವರು ಬಾಹ್ಯಾಕಾಶದಲ್ಲಿ ಮುಂದುವರಿಯಬೇಕಾಯಿತು.

ನಾಸಾದ ಧನ್ಯವಾದ:
“ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ” ಎಂದು ನಾಸಾ ಅಧಿಕೃತ ಹೇಳಿಕೆ ನೀಡಿದ್ದು, ಸ್ಪೇಸ್ ಎಕ್ಸ್ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸಿದೆ.

ಗುಜರಾತ್‌ನಲ್ಲಿ ಸಂಭ್ರಮ:
ಸುನೀತಾ ವಿಲಿಯಮ್ಸ್ ಅವರ ಪೂರ್ವಿಕರ ಮನೆ ಇರುವ ಗುಜರಾತ್‌ನ ಜುಲಾಸಾನ್ ಗ್ರಾಮದಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.