
ಮುಂಬೈ : ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ತಮ್ಮ ಹೇಳಿಕೆಗಳಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆಯೊಂದು ಭಾರಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮತ್ತು ಟ್ರೋಲ್‌ಗೆ ಗುರಿಯಾಗಿದೆ.
ಡಿಂಪಲ್ ಯಾದವ್ ಮೇಲೆ ಕ್ರಶ್ ಎಂದ ಸ್ವರಾ
ಸಂದರ್ಶನದಲ್ಲಿ ನಿಮಗೆ ಯಾರ ಮೇಲೆ ಕ್ರಶ್ ಇದೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸ್ವರಾ, “ನನಗೂ ಕ್ರಶ್ ಇದ್ದಾರೆ, ಬೇರೆ ಯಾರೂ ಅಲ್ಲ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್” ಎಂದು ಹೇಳಿದ್ದಾರೆ.
ಇದೇ ವೇಳೆ ನಗುತ್ತಾ, ಈ ಹೇಳಿಕೆ ಉತ್ತರ ಪ್ರದೇಶದಲ್ಲಿ ನನ್ನ ಪತಿಯ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಬಹುದು ಎಂದು ಕೂಡ ಅವರು ಹೇಳಿದ್ದಾರೆ. ಸ್ವರಾ ಅವರ ಈ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‌ಗಳು ಮತ್ತು ವಿರೋಧಗಳು ವ್ಯಕ್ತವಾಗಿವೆ.