ಕಾರ್ಕಳದಲ್ಲಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Date:

spot_img

ಕಾರ್ಕಳ : ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಪ್ರದೀಪ್ ರವರು , ನಾಡಪ್ರಭು ಕೆಂಪೇಗೌಡರು ದೇಶದ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಚರಿತ್ರೆಯಲ್ಲಿರುವ ಮಹತ್ವದ ನಾಯಕರಾಗಿದ್ದು, ಅವರ ದೂರದೃಷ್ಟಿ ಹಾಗೂ ಪ್ರಜೆಪರ ಆಡಳಿತ ನಮಗೆಲ್ಲಾ ಮಾದರಿಯಾಗಿದೆ ಅವರು ತಮ್ಮ ಆಡಳಿತದಲ್ಲಿ ಸಾಮಾಜಿಕ ಸಾಮರಸ್ಯ, ಆರ್ಥಿಕ ಪ್ರಗತಿ, ಅಭಿವೃದ್ಧಿಗೆ ಉತ್ತೇಜನ ನೀಡಿದ್ದು, ಇಂದು ಬೆಂಗಳೂರು ಮಹಾನಗರವಾಗಲು ಅವರ ಕೊಡುಗೆ ಅಪಾರ” ಎಂದು ಹೇಳಿದರು.

ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ, ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳು ನಡೆದಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಕಳ ಎಎಸ್‌ಪಿ ಡಾ. ಹರ್ಷ ಪ್ರಿಯಂವದ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟೊ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ಶಾಲೆಯ ಮುಖ್ಯಶಿಕ್ಷಕ ದಿವಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಕ ಗಣೇಶ್ ಜಲ್ಸೂರ್ ರವರು ಕೆಂಪೇಗೌಡರ ಜೀವನವೈಭವದ ಕುರಿತು ವಿಶ್ಲೇಷಣಾತ್ಮಕ ಉಪನ್ಯಾಸ ನೀಡಿದರೆ, ಶಿಕ್ಷಕ ದೇವದಾಸ್ ಕೆರೆಮನೆ ಕಾರ್ಯಕ್ರಮವನ್ನು ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.