
ಮುಂಬೈ: ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ ಅವರ ಪ್ರೇಮ ಸಂಬಂಧ ಮುರಿದು ಬಿದ್ದಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗೆ ಇಬ್ಬರೂ ಪರಸ್ಪರ ದೂರವಾಗಿದ್ದು, ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ತಮನ್ನಾ ಮತ್ತು ವಿಜಯ್, ಲಸ್ಟ್ ಸ್ಟೋರೀಸ್ 2 ಸಿನಿಮಾ ಮೂಲಕ ಪರಿಚಿತರಾಗಿ ನಂತರ ಒಟ್ಟಿಗೆ ಹಲವು ಬಾರಿ ಕಾಣಿಸಿಕೊಂಡಿದ್ದರು. ಈ ಜೋಡಿ ಹೊಸ ವರ್ಷಾಚರಣೆ ವೇಳೆ ತಬ್ಬಿಕೊಂಡು ಮುತ್ತಿಡುವ ವಿಡಿಯೋ ವೈರಲ್ ಆಗಿತ್ತು. ಇದಾದ ನಂತರ ಅವರ ಸಂಬಂಧವನ್ನು ಅಧಿಕೃತವಾಗಿಯೇ ಒಪ್ಪಿಕೊಂಡಿದ್ದರು.
ಆದರೆ, ಮೂಲಗಳ ಪ್ರಕಾರ, ಕೆಲವು ವಾರಗಳ ಹಿಂದೆಯೇ ಇವರಿಬ್ಬರ ನಡುವೆ ಬಿರುಕು ಉಂಟಾಗಿ ಸಂಬಂಧ ಅಂತ್ಯಗೊಂಡಿದೆ. ಅವರಿಬ್ಬರೂ ಸ್ನೇಹಿತರಾಗಿ ಮುಂದುವರಿಯಲು ನಿರ್ಧಾರ ಮಾಡಿಕೊಂಡಿದ್ದಾರೆ. ಆದರೂ, ಈ ಕುರಿತು ತಮನ್ನಾ ಅಥವಾ ವಿಜಯ್ ಅವರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಈ ಸುದ್ದಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಅವರಿಬ್ಬರೂ ಮತ್ತೆ ಒಟ್ಟಾಗಬಹುದೇ ಎಂಬ ಪ್ರಶ್ನೆ ಹುಟ್ಟಿಸಿದೆ.