
ಬೈಲೂರು: ದಿನಾಂಕ 06-09-2025 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೇನ್ ಇಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ವಿನೂತನವಾಗಿ ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಶೆಟ್ಟಿಯವರು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಆಶಾಭನುರವರು ಎಲ್ಲರನ್ನು ಸ್ವಾಗತಿಸಿ, ಶಿಕ್ಷಕರಾದ ಶ್ರೀ ಪ್ರಕಾಸ್ ಕುಂದರ್ ಅವರು ಧನ್ಯವಾದ ಸಮರ್ಪಿಸಿದರು. ಸಹಶಿಕ್ಷಕಿ ಶ್ರೀಮತಿ ಸುಮಾದೇವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿ ಶ್ರೀಮತಿ ಅಶ್ವಿನಿ ನಾಯಕ್, ಶ್ರೀಮತಿ ಸುರೇಖಾ ಡಿ. ಶೇಟ್ ರವರು ಸಹಕರಿಸಿದರು. ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಕುರಿತು ಭಾಷಣ ಮಾಡಿದರು. ಅಧ್ಯಕ್ಷರು ಶಿಕ್ಷಕರ ವೃಂದಕ್ಕೆ ಶುಭಾಶಯ ನೀಡಿದರು. ಈ ಕಾರ್ಯಕ್ರಮವನ್ನು ಶಾಲಾ ಎಸ್.ಡಿ. ಎಂ.ಸಿ ಯವರು ಪೋಷಕರು ಹಾಗೂ ವಿದ್ಯಾರ್ಥಿಗಳು ಆಯೋಜಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಶೆಟ್ಟಿ, ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ಹಾಗೂ ಶಿಕ್ಷಕ ವೃಂದದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ವಿವಿಧ ಮನೋರಂಜನಾ ಆಟಗಳ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಸಿಹಿ ತಿಂಡಿ ವಿತರಣೆ ಹಾಗೂ ಸಿಹಿಯೂಟದ ವ್ಯವಸ್ಥೆ ಮಾಡಲಾಗಿತ್ತು