
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡಿನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ವಿವಾಹ ಸಮಾರಂಭ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಜರುಗಲಿದೆ.
ಮದುವೆಯ ಮೊದಲ ದಿನ ಬುಧವಾರ ಸಂಜೆ ವರಪೂಜೆ ನಡೆದಿದ್ದು, ಮಾ.6ರಂದು ಬೆಳಗ್ಗೆ ಕಾಶಿಯಾತ್ರೆ, ಜೀರಿಗೆ ಬೆಲ್ಲ ಧಾರೆ, ನಿರೀಕ್ಷಣೆ ಮುಹೂರ್ತ, ಮಾಂಗಲ್ಯಧಾರಣೆ ಹಾಗೂ ಲಾಜಾ ಹೋಮ ನಡೆಯಲಿದೆ. ತುಲಾ ಲಗ್ನದಲ್ಲಿ ಬೆಳಗ್ಗೆ 9.30ರಿಂದ 10.15ರೊಳಗೆ ವಿವಾಹ ನೆರವೇರಲಿದೆ.
ಬಳಿಕ ತೇಜಸ್ವಿ ಸೂರ್ಯರ ಗಿರಿನಗರ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಮಾ.9 ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆರತಕ್ಷತೆ ಜರುಗಲಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜಕೀಯ ಮುಖಂಡರು ಭಾಗಿಯಾಗುವ ಸಾಧ್ಯತೆಯಿದೆ.