
ಬಂಟ್ವಾಳ: ಶನಿವಾರ ಮಧ್ಯಾಹ್ನ ಕೆಳಗಿನ ತುಂಬೆ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟವರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.
ನೌಫಲ್ ಅವರು ಶನಿವಾರ ಬೆಳಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಕಾರನ್ನು ಖರೀದಿಸಿದ್ದರು. ಹೊಸ ಕಾರನ್ನು ತೆಗೆದುಕೊಂಡು ಹೋಗುತ್ತಿದ್ದಾಗ, ಕೆಳಗಿನ ತುಂಬೆಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ನೌಫಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.