spot_img

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ! ಹಲವರಿಗೆ ಗಾಯ

Date:

spot_img

ಕಾಪು: ಉಡುಪಿ ಹಾಗೂ ಮಂಗಳೂರು ನಡುವೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬಸ್ಸು ಕೆಎಸ್‌ಆರ್‌ಟಿಸಿ ಬಸ್‌ನೊಂದಿಗೆ ಅತಿವೇಗದ ಓಟದಲ್ಲಿ ಸ್ಪರ್ಧೆ ನಡೆಸುತ್ತಿದ್ದು, ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಪರಿಣಾಮವಾಗಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ನಿವಾಸಿಗಳು ಅಪಘಾತದ ತಕ್ಷಣವೇ ಧಾವಿಸಿ ಗಾಯಾಳುಗಳನ್ನು ಬಸ್‌ನ ಕಿಟಕಿಗಳ ಮೂಲಕ ಹೊರಗೆ ತೆಗೆದು, ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಕಾಪು ಪೊಲೀಸರು ಕೂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ ಹಾಗೂ ತನಿಖೆ ಮುಂದುವರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣದ ಅವಘಡಗಳ ಬಗ್ಗೆ ದೈವದ ಮುನ್ಸೂಚನೆ!

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ 'ಕಾಂತಾರ: ಚಾಪ್ಟರ್ 1' ಚಿತ್ರದ ಬಿಡುಗಡೆ ಸಿದ್ಧವಾಗಿದ್ದು, ಚಿತ್ರೀಕರಣದ ವೇಳೆ ನಡೆದ ಘಟನೆಗಳ ಬಗ್ಗೆ ಆಶ್ಚರ್ಯಕರ ಮಾಹಿತಿ ಹೊರಬಿದ್ದಿದೆ.

ದರ್ಶನ್ ಬಂಧನ: ‘ದಿ ಡೆವಿಲ್’ ಚಿತ್ರದ ಹಾಡು ಬಿಡುಗಡೆ ಮುಂದೂಡಿಕೆ, ಅಭಿಮಾನಿಗಳಿಗೆ ನಿರಾಸೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದು, ಇದರ ಪರಿಣಾಮವಾಗಿ ಅವರ ಬಹುನಿರೀಕ್ಷಿತ 'ದಿ ಡೆವಿಲ್' (The Devil) ಸಿನಿಮಾದ ಹಾಡು ಬಿಡುಗಡೆಯನ್ನು ಮುಂದೂಡಲಾಗಿದೆ.

ಶಿವರಾಧನೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಸಂಜೀವಿನಿ ಬಿಲ್ವಪತ್ರೆ!

ಶಿವನಿಗೆ ಅತ್ಯಂತ ಪ್ರಿಯವಾದ ಬಿಲ್ವಪತ್ರೆ ಕೇವಲ ಪೂಜೆಗೆ ಮಾತ್ರವಲ್ಲ, ಔಷಧೀಯ ಗುಣಗಳಿಂದಲೂ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.

ಕ್ರಿಯೇಟಿವ್ ಪುಸ್ತಕಧಾರೆ – 2025 ; 22 ಕೃತಿಗಳ ಅನಾವರಣ

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 13ರಂದು " ಕ್ರಿಯೇಟಿವ್ ಪುಸ್ತಕ ಧಾರೆ - 2025 " ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ... ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು.