ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

Date:

spot_img

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಿದಿಯೂರು ನಿವಾಸಿ, ಭಜನೆ ಹಾಡುಗಾರ ಮತ್ತು ತಬಲ ವಾದಕ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ.

ಕುಂದಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದಾಗಿ ಪ್ರಥಮವಾಗಿ ಒಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ. ಬಳಿಕ ಕಾರು ರಸ್ತೆ ವಿಭಾಜಕದ ಮೇಲಿಂದ ಹೋಗಿ ಎದುರಿನಿಂದ ಬರುತ್ತಿದ್ದ ಇನ್ನೊಂದು ವಾಹನಕ್ಕೆ ಡಿಕ್ಕಿಯಾಗಿ, ಕೊನೆಗೆ ಸಂಕೀರ್ತನ್ ಸವಾರಿಯಾಗಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ, ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ಗಂಭೀರವಾಗಿ ಗಾಯಗೊಂಡ ಸಂಕೀರ್ತನ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಸಂಕೀರ್ತನ್ ಅವರು ಮಂಗಳೂರಿನ ಮೂಡುಬಿದಿರೆಯ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಬಿ.ಎ ವಿದ್ಯಾರ್ಥಿಯಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಣ್ಣೆ ತಿಂದ್ರೆ ಆರೋಗ್ಯಕ್ಕೆ ಲಾಭವೋ, ನಷ್ಟವೋ? ಅಸಲಿ ವಿಷಯ ಇಲ್ಲಿದೆ ನೋಡಿ

ಮಿತವಾಗಿ ಬೆಣ್ಣೆ ಸೇವಿಸುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಪೋಷಕಾಂಶಗಳ ಮಾಹಿತಿ ಇಲ್ಲಿದೆ.

ಸಿಎಂ ಡಿ.ಕೆ. ಶಿವಕುಮಾರ್ ಆಡಳಿತದ ಟಾಪ್ 5 ನಿರ್ಧಾರಗಳು

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪ್ರಮುಖ 5 ಸುಧಾರಣಾ ಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಆಸ್ಪತ್ರೆಗೆ ಹೊಸ ವೈದ್ಯರ ನೇಮಕಾತಿ: ಸರ್ಕಾರಕ್ಕೆ ಧನ್ಯವಾದ

ಕಾರ್ಕಳ ತಾಲೂಕು ಆಸ್ಪತ್ರೆಗೆ ಹೊಸ ವೈದ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರ್ವಜನಿಕರ ಸಮಸ್ಯೆಗೆ ಸಿಕ್ಕ ಪರಿಹಾರದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಡ್ತಲ ಮಾಜಿ ಪಂಚಾಯತ್ ಸದಸ್ಯ ವೆಂಕಪ್ಪ ನಾಯ್ಕ್ ನಿಧನ

ಕಡ್ತಲದ ಹಿರಿಯ ಮುಖಂಡ ಹಾಗೂ ಮಾಜಿ ಪಂಚಾಯತ್ ಸದಸ್ಯ ವೆಂಕಪ್ಪ ನಾಯ್ಕ್ (86) ನಿಧನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.