ಬಿಪಿಎಲ್ ಪಡಿತರ ಚೀಟಿ ರದ್ದಿಗೆ ಕೇಂದ್ರ ಸರಕಾರದ ಸೂಚನೆ ; ಶಾಸಕರಿಗೆ ಬಡ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರದ ವಿರುದ್ದ ಪ್ರತಿಭಟಿಸಲಿ : ಶುಭದರಾವ್

Date:

spot_img
shubhadrao

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಅವರಿಗೆ ತಿರುಗು ಬಾಣವಾಗಿದೆ : ಶುಭದರಾವ್

ಕೇಂದ್ರದ ಬಿಜೆಪಿ‌ ಸರಕಾರ ರಾಜ್ಯದಲ್ಲಿ‌ 7.76ಲಕ್ಷ ಶಂಕಾಸ್ಪದ ಪಡಿತರ ಚೀಟಿ ಇದೆ ಎಂದು ಗುರತಿಸಿ ಅದರಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಕಾರ್ಡ್ ರದ್ದುಗೊಳಿಸುವಂತೆ ಸೂಚನೆ ನೀಡಿದ್ದು ಇದು ಬಿಜೆಪಿ ಸರಕಾರದ ಬಡವರ ವಿರೋದಿ ಧೋರಣೆಯಾಗಿದ್ದು ಶಾಸಕರಿಗೆ ಬಡ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರ ವಿರುದ್ದ ಪ್ರತಿಭಟನೆ ನಡೆಸಲಿ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರದ ಸರಕಾರದ ತೆರಿಗೆ ಮಂಡಲಿಯ ವರದಿ ಪ್ರಕಾರ ಕರ್ನಾಟಕದಲ್ಲಿ 5.80 ಲಕ್ಷ ಜನರು ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲ ಅಂತವರ ಕಾರ್ಡ್ ಈ ತಿಂಗಳ 30 ರ ಒಳಗಾಗಿ ರದ್ದುಗೊಳಿಸುವಂತೆ ಸೂಚನೆ ನೀಡಿದ್ದು ಸರಿಯಲ್ಲ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಕಾರ್ಕಳ ಕಾಂಗ್ರೆಸ್ ಮನವಿ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಕಾರ್ಕಳದಲ್ಲಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿ ರಾಜ್ಯ ಸರಕಾರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದೆ ಎಂದು ಸುಳ್ಳು ಹೇಳಿ ಜನರಲ್ಲಿ ಭಯವನ್ನು ಹುಟ್ಟಿಸುವ ಕೆಲಸ ಮಾಡಿದ್ದರು. ಆದರೆ ಕೇಂದ್ರ ಸರಕಾರದ ಸೂಚನೆ ಅವರಿಗೆ ತಿರುಗು ಬಾಣವಾಗಿದೆ. ಸುಳ್ಳನ್ನೇ ಪ್ರತಿಪಾದಿಸುವ ಶಾಸಕರ ಮತ್ತೊಂದು ಸುಳ್ಳು ಕೇಂದ್ರ ಸರಕಾರ ನೀಡಿದ ಸೂಚನೆಯಿಂದ ಬಹಿರಂಗಗೊಂಡಿದೆ, ಶಾಸಕರಿಗೆ ನಿಜವಾಗಿಯೂ ಬಡ ಜನರ ಕಾಳಜಿ ಇದ್ದರೆ ಈಗ ಮೌನ ಮುರಿದು ಪ್ರತಿಭಟಿಸಲಿ ಎಂದು ಸವಾಲು ಹಾಕಿದ್ದಾರೆ.

ಕೇಂದ್ರ ಬಿಜೆಪಿ ಸರಕಾರದ ಈ ನಿರ್ಧಾರದಿಂದ ಕ್ಷೇತ್ರದ ಜನರು ಭಯಪಡುವ ಅಗತ್ಯವಿಲ್ಲ. ಈ ಜನ ವಿರೋದಿ ನಿರ್ಧಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಬಡ ಜನರ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧಕ್ಷರಾದ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ