spot_img

ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ತೆರವು ರಾಜ್ಯ ಕಾಂಗ್ರೆಸ್ ಸರಕಾರದ ಕೀಳು ಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಕಿಶೋರ್ ಕುಮಾರ್ ಕುಂದಾಪುರ

Date:

spot_img

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಜನಪರ ಯೋಜನೆಯಾದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ದೊರಕಬೇಕು, ಯಾವುದೇ ಔಷಧಿಗಳ ಕೊರತೆಯಿಂದ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಸದುದ್ಧೇಶದಿಂದ ಕೇಂದ್ರ ಸರಕಾರ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯುವ ಮೂಲಕ ಬಡ ಜನತೆಯ ಆರೋಗ್ಯ ಸಂರಕ್ಷಣೆಗೆ ವಿಶೇಷ ಕೊಡುಗೆಯನ್ನು ನೀಡಿದೆ. ಆದರೆ ಜನೌಷಧಿ ಕೇಂದ್ರದ ನಾಮಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಇರುವುದನ್ನು ಸಹಿಸದ ರಾಜ್ಯ ಸರಕಾರ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಔಷಧಿಗಳ ಸಮರ್ಪಕ ವ್ಯವಸ್ಥೆಯನ್ನೂ ಮಾಡದೆ ಕೇವಲ ದ್ವೇಷ ರಾಜಕಾರಣಕ್ಕಾಗಿ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಿ ಬಡವರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದು ಅತ್ಯಂತ ಖಂಡನೀಯ.

ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲಾ ಔಷದಿಗಳು ಉಚಿತವಾಗಿ ದೊರೆಯುತ್ತದೆ ಎಂಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನಾಧರಿಸಿ ಸುದ್ದಿ ಮಾಧ್ಯಮವೊಂದು ಕೆಲವು ಪ್ರಮುಖ ಜಿಲ್ಲಾಸ್ಪತ್ರೆಗಳಿಗೆ ಬೇಟಿ ನೀಡಿ ಉಚಿತ ಔಷದಿಗಳ ಲಭ್ಯತೆಯ ಕುರಿತು ರಿಯಾಲಿಟಿ ಚೆಕ್ ನಡೆಸಿದಾಗ ಯಾವುದೇ ಅಗತ್ಯ ಔಷದಿಗಳು, ಮಾತ್ರೆಗಳು ಜಿಲ್ಲಾಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಬಡವರು ಜಿಲ್ಲಾಸ್ಪತ್ರೆಗಳಲ್ಲಿ ಔಷಧಿಗಾಗಿ ಪರದಾಟ ನಡೆಸುವ ದಯನೀಯ ಸ್ಥಿತಿ ರಾಜ್ಯ ಸರಕಾರದ ಬೇಜವಾಬ್ದಾರಿತನವನ್ನು ಜಗಜ್ಜಾಹೀರುಗೊಳಿಸಿದೆ.

ರಾಜ್ಯ ಸರಕಾರ ಜನರ ಸಂಕಷ್ಟವನ್ನು ಅರ್ಥೈಸಿಕೊಂಡು ಆರೋಗ್ಯ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಕೀಯ ಲಾಭದ ಲೆಕ್ಕಾಚಾರವನ್ನು ಹಾಕದೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವ ಜೊತೆಗೆ ಎಲ್ಲಾ ರೀತಿಯ ಅಗತ್ಯ ಔಷಧಿಗಳ ಪೂರೈಕೆಗೆ ತುರ್ತು ಕ್ರಮ ವಹಿಸಬೇಕು ತಪ್ಪಿದಲ್ಲಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮರುಸ್ಥಾಪನೆಗೆ ಮುಂದಾಗಬೇಕು ಎಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಜಿಲ್ಲಾಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಿ ಬಡವರ ಪಾಲಿಗೆ ಮರಣ ಶಾಸನ ಬರೆದಿರುವ ಜೊತೆಗೆ ವಿಪರೀತ ಬೆಲೆ ಏರಿಕೆ, ಹಾಲು ಉತ್ಪಾದಕರ ಸಬ್ಸಿಡಿ ಕಡಿತ ಸಹಿತ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್ ವಿತರಣೆ ಮುಂತಾದ ಬಿಜೆಪಿ ಆಡಳಿತಾವಧಿಯ ಜನಪರ ಯೋಜನೆಗಳಿಗೆ ರಾಜ್ಯದ ಪಾಲಿನ ಅನುದಾನವನ್ನು ನೀಡದೆ ಎಳ್ಳು ನೀರು ಬಿಟ್ಟಿರುವ ಭ್ರಷ್ಟ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯದ ಜನತೆ ರೋಸಿಹೋಗಿದ್ದು ರಾಜ್ಯ ಸರಕಾರದ ಜನವಿರೋಧಿ ನೀತಿಗೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

AI ಕ್ರಾಂತಿ: ಆಗಸ್ಟ್‌ನಲ್ಲಿ ಓಪನ್‌ಎಐನ ಬಹುನಿರೀಕ್ಷಿತ GPT-5 ಬಿಡುಗಡೆಗೆ ಸಿದ್ಧತೆ

ಓಪನ್‌ಎಐ ತನ್ನ ನೂತನ ಮತ್ತು ಹೆಚ್ಚು ಶಕ್ತಿಶಾಲಿ GPT-5 ಮಾದರಿಯನ್ನು ಆಗಸ್ಟ್‌ನ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ

ದಿನ ವಿಶೇಷ – ನಿಸರ್ಗ ಸಂರಕ್ಷಣಾ ದಿನ

ಈ ದಿನವು ನಮ್ಮ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮತ್ತು ಸುಸ್ಥಿರವಾಗಿ ಬಳಸುವ ಮಹತ್ವವನ್ನು ನೆನಪಿಸುತ್ತದೆ.

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.