ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದದಲ್ಲಿ ಮಹಿಳೆಯೊರ್ವರ ಮನೆಗೆ ಗೋ ಕಳ್ಳರು ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಗೋ ಕಳ್ಳತನ ನಡೆಸಿರುವುದು ಅತ್ಯಂತ ಖಂಡನೀಯ : ರಾಕೇಶ್‌ ಶೆಟ್ಟಿ ಅಧ್ಯಕ್ಷರು ಯುವಮೋರ್ಚಾ ಕಾರ್ಕಳ

Date:

spot_img
rakesh-shetty

ಕಾರ್ಕಳ : ಗೋ ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದೆ. ಹೈನುಗಾರಿಕೆ ನಡೆಸಿ ಜೀವ ನಡೆಸುತ್ತಿರುವ ಮಹಿಳೆಯ ಮನೆಯ ಹಟ್ಟಿಯಿಂದಲೇ ದನಗಳ ಕಳ್ಳತನ ನಡೆದಿದೆ. ಮಾತ್ರವಲ್ಲದೆ ಮಹಿಳೆಗೆ ಮಾರಕಾಸ್ತ್ರದಿಂದ ಬೆದರಿಸಿರುವುದು ಅತಂಕಕಾರಿ ಘಟನೆ. ಈ ರೀತಿ ಪೋಲಿಸರ ಭಯವಿಲ್ಲದೆ ಕಳ್ಳತನ ನಡೆಯುವುದನ್ನು ನೋಡಿದರೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾದ ಹಾಗೆ ತೋರುತ್ತಿದೆ. ಈ ರೀತಿಯ ಘಟನೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದು ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಂಡಂತಿದೆ ಪರೋಕ್ಷವಾಗಿ ಪೊಲೀಸ್ ಇಲಾಖೆ ಬೆಂಬಲ ಈ ದುಷ್ಕರ್ಮಿಗಳಿಗೆ ಸಿಗುತ್ತಿದೆಯೋ ಎನ್ನುವ ಮಾತುಗಳು ಕೂಡ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ.

ಈ ರೀತಿಯ ಪ್ರಕರಣ ಕಾರ್ಕಳದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ ಆದರೆ ಪೋಲಿಸ್‌ ಇಲಾಖೆ ದನಗಳ್ಳರ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಸಂಪೂರ್ಣ ವಿಫಲರಾಗಿದ್ದಾರೆ. ಒಂದು ರೀತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ನೀತಿಯು ಗೋ ಕಳ್ಳರಿಗೆ ವರದಾನ ಆದಂತಿದೆ.ಈ ದುಷ್ಕೃತ್ಯದ ಹಿಂದಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸದಿದ್ದಲ್ಲಿ ಸಮಸ್ತ ಹಿಂದೂ ಸಮಾಜ ತಮ್ಮ ರಕ್ಷಣೆಗೆ ಬೀದಿಗಿಳಿದು ಪೊಲೀಸ್ ಠಾಣೆಯ ಮುಂದೆಯೇ ಪ್ರತಿಭಟಿಸುವ ಸಮಯ ಬರಬಹುದು ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ರಾಕೇಶ್‌ ಶೆಟ್ಟಿ ಕುಕ್ಕುಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.