
ಬೆಳಗಾವಿ: ಗ್ಯಾಸ್ ಕಟರ್ ಬಳಸಿ ಎಟಿಎಂ ಹಣ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು ಕೇವಲ 7 ನಿಮಿಷಗಳಲ್ಲೇ ಎಸ್‌ಬಿಐ ಎಟಿಎಂ ಅನ್ನು ಗ್ಯಾಸ್ ಕಟರ್ ಬಳಸಿ ಮುರಿದು, ₹75,600 ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೂಡ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.