ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ : ನಿರ್ಮಾಪಕರಿಂದ ಹೈಕೋರ್ಟ್‌ಗೆ ಅರ್ಜಿ

Date:

spot_img

ಬೆಂಗಳೂರು: ಕನ್ನಡ ಭಾಷೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಹೊತ್ತಿಕೊಂಡಿದ್ದು, ಈ ಪರಿಣಾಮವಾಗಿ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೊಳ್ಳುವ ಬಗ್ಗೆ ಗಂಭೀರ ಅನುಮಾನ ಎದುರಾಗಿದೆ.

ಈಗಾಗಲೇ ಸಿನಿಮಾ ಬಿಡುಗಡೆಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ, ಕಮಲ್ ಹಾಸನ್ ಮಾಲಿಕತ್ವದ ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಸಂಸ್ಥೆಯು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದೆ. “ಕಮಲ್ ಹಾಸನ್ ಅವರ ಹೇಳಿಕೆಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಸಿನಿಮಾ ಪ್ರದರ್ಶನವನ್ನು ತಡೆಯುವುದು ಅನ್ಯಾಯ,” ಎಂಬುದಾಗಿ ಚಿತ್ರ ನಿರ್ಮಾಪಕರು ಹೈಕೋರ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

2025ರ ಜೂನ್ 5ರಂದು ‘ಥಗ್ ಲೈಫ್’ ಸಿನಿಮಾ ರಾಜ್ಯಾದ್ಯಾಂತ ಬಿಡುಗಡೆಯಾಗಬೇಕಿತ್ತು. ಆದರೆ ಕೆಲವು ಸಂಘಟನೆಗಳು ಹಾಸನ್ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದು, ಚಿತ್ರ ವಾಣಿಜ್ಯ ಮಂಡಳಿ ಮತ್ತು ಪೊಲೀಸರು ಚಿತ್ರ ಬಿಡುಗಡೆಗೆ ತಡೆಯುಂಟು ಮಾಡಬಹುದಾದ ಭೀತಿ ನಿರ್ಮಾಣವಾಗಿದೆ.

ಹೀಗಾಗಿ, ಚಿತ್ರಕ್ಕೆ ಯಾವುದೇ ತಡೆ ಉಂಟಾಗದಂತೆ ಹಾಗೂ ಸರ್ಕಾರ ಅಥವಾ ವಾಣಿಜ್ಯ ಮಂಡಳಿ ಚಿತ್ರ ಪ್ರದರ್ಶನವನ್ನು ನಿಷೇಧಿಸದಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ರಾಜ್ ಕಮಲ್ ಸಂಸ್ಥೆಯ ಸಿಇಒ ಮೂಲಕ ಸಲ್ಲಿಸಲಾಗಿದ್ದು, ನ್ಯಾಯಾಲಯದ ನಿರ್ಧಾರವೇ ಮುಂದಿನ ತೀರ್ಮಾನದಲ್ಲಿ ನಿರ್ಣಾಯಕವಾಗಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.