spot_img

ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ: ನಿಷೇಧಾಜ್ಞೆ ಜಾರಿ

Date:

spot_img

ಉಡುಪಿ: ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಜಿಲ್ಲೆಯಲ್ಲಿ ನಡೆಯುವ SSLC ಪರೀಕ್ಷೆಗಳ ವೇಳೆ ಅವ್ಯವಹಾರ ತಡೆಯಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗಿದೆ.

ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶದ ಪ್ರಕಾರ:

*ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್ ಮುಂತಾದವು ಮುಚ್ಚಲ್ಪಡಲಿದೆ.
*ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಲು ನಿರ್ಬಂಧ.
*ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ.
*ಧ್ವನಿವರ್ಧಕ ಬಳಕೆ ಸಂಪೂರ್ಣ ನಿಷೇಧ.
*ಮೆಟಲ್ ವಾಟರ್ ಬಾಟಲ್ ಹಾಗೂ ಅಪಾರದರ್ಶಕ ಬಾಟಲ್‌ಗಳನ್ನು ತರಲು ನಿರ್ಬಂಧ.
*ಹಿಯರಿಂಗ್ ಏಡ್ ಧರಿಸಿದ ಅಭ್ಯರ್ಥಿಗಳಿಗೆ ವೈದ್ಯಕೀಯ ದಾಖಲೆಗಳೊಂದಿಗೆ ವಿಶೇಷ ತಪಾಸಣೆ ಕಡ್ಡಾಯ.
*ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಹಾಗೂ ಇತರ ಸಂಪರ್ಕ ಸಾಧನಗಳ ಬಳಕೆ ನಿಷೇಧ.

ಈ ನಿಯಮಗಳು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಸಂಚಾರ ಸ್ಥಗಿತ

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಟೇಕ್‌ಆಫ್ ವೇಳೆ ಅಗ್ನಿ ಅವಘಡ: 179 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷಿತ ಸ್ಥಳಾಂತರ

ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದರ ಟೇಕ್‌ಆಫ್ ಪ್ರಯತ್ನದ ಸಂದರ್ಭದಲ್ಲಿ ಪ್ರಮುಖ ಚಕ್ರಗಳ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರಿ ಆತಂಕಕ್ಕೆ ಕಾರಣವಾಗಿದೆ

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಮರು ವಿಚಾರಣೆ – ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಂದ ನೇತೃತ್ವ

ರಾಜ್ಯಾದ್ಯಂತ ತೀವ್ರ ಸದ್ದು ಮಾಡುತ್ತಿರುವ ಧರ್ಮಸ್ಥಳ ಅನಾಮಿಕ ದೂರು ಪ್ರಕರಣದ ತನಿಖೆಯು ಮಹತ್ವದ ಘಟ್ಟ ತಲುಪಿದೆ.