ಮೋದಿ ನೇತೃತ್ವದಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ನಿರ್ಧಾರ : ಪಹಲ್ಗಾಮ್ ದಾಳಿ ಬಳಿಕ ಪಾಕ್ ವಿರುದ್ಧ ತೀವ್ರ ತಿರುಗೇಟು

Date:

spot_img

ನವದೆಹಲಿ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಬಲಿಯಾಗಿದ್ದು, ಈ ಅಮಾನವೀಯ ಕೃತ್ಯದ ಬೆನ್ನಲ್ಲೇ ಕೇಂದ್ರ ಸರ್ಕಾರ ತೀವ್ರ ನಿರ್ಧಾರಗಳನ್ನು ಕೈಗೊಂಡಿದೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಂಪುಟ ಸಮಿತಿ ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ಗಂಭೀರ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.

ದಾಳಿಗೆ ಹೊಣೆ ಹೊತ್ತಿರುವ ‘ಕಾಶ್ಮೀರ್ ರೆಸಿಸ್ಟೆನ್ಸ್’ ಸಂಘಟನೆಯು ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಅಂಗಸಂಸ್ಥೆಯಾಗಿದೆ ಎಂಬುದು ಭದ್ರತಾ ಸಂಸ್ಥೆಗಳ ತನಿಖೆಯಿಂದ ಹೊರಬಿದ್ದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಭಾರತವು ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಕ್ರಮಗಳನ್ನು ಘೋಷಿಸಿದೆ.

ಭಾರತ ಸರ್ಕಾರ ಪ್ರಕಟಿಸಿದ ಪ್ರಮುಖ ಕ್ರಮಗಳು ಇಂತಿವೆ:

  • ಅಟ್ಟಾರಿ – ವಾಘಾ ಗಡಿಯನ್ನು ಶಾಶ್ವತವಾಗಿ ಮುಚ್ಚಲು ನಿರ್ಧಾರ
  • ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸುವುದು
  • ಇನ್ನು ಮುಂದೆ ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ಪ್ರವೇಶಕ್ಕೆ ನಿಷೇಧ
  • ಈಗಾಗಲೇ ಭಾರತದಲ್ಲಿ ಇರುವ ಪಾಕ್ ಪ್ರಜೆಗಳು 48 ಗಂಟೆಗಳ ಒಳಗೆ ದೇಶ ತೊರೆಯಬೇಕು
  • ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನ ರಕ್ಷಣಾ, ನೌಕಾ ಹಾಗೂ ವಾಯು ಸಲಹೆಗಾರರಿಗೆ ದೇಶ ತೊರೆಯಲು 7 ದಿನಗಳ ಗಡುವು
  • ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ರಕ್ಷಣಾ, ನೌಕಾ ಹಾಗೂ ವಾಯು ಸಲಹೆಗಾರರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಲು ತೀರ್ಮಾನ
  • ಪಾಕಿಸ್ತಾನಿ ಹೈಕಮಿಷನ್‌ನ ಸಿಬ್ಬಂದಿ ಸಂಖ್ಯೆ 55 ರಿಂದ 30 ಕ್ಕೆ ಇಳಿಸುವ ತೀರ್ಮಾನ; ಈ ಕ್ರಮ ಮೇ 1ರಿಂದ ಜಾರಿಗೆ ಬರಲಿದೆ

ಈ ಮಹತ್ವದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ದೇಶದ ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಭಾರತದ ಈ ತೀವ್ರ ತೀರ್ಮಾನಗಳು ಉಗ್ರರ ವಿರುದ್ಧದ ಕಠಿಣ ನಿಲುವಿನ ಸಂಕೇತವಾಗಿದ್ದು, ಪಾಕಿಸ್ತಾನದ ಮೇಲೆ ರಾಜತಂತ್ರ ಮತ್ತು ಭದ್ರತಾ ಮಾದರಿಯಲ್ಲಿ ಬಲಿಷ್ಠ ಒತ್ತಡ ತರಲಿದೆ ಎಂಬ ನಿರೀಕ್ಷೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.