ಮಲ್ಪೆ ಕಡಲತೀರದಲ್ಲಿ ಪ್ರವಾಸಿಗರು ನೀರಿಗಿಳಿಯದಂತೆ ನಿಷೇಧ : ಮುನ್ನೆಚ್ಚರಿಕಾ ಕ್ರಮವಾಗಿ ತಡೆಬೇಲಿ ನಿರ್ಮಾಣ

Date:

spot_img

ಮಲ್ಪೆ : ಮಳೆಗಾಲದ ಕಾರಣದಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮಲ್ಪೆ ಕಡಲತೀರದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ನೀರಿಗೆ ಇಳಿಯುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ನಿರ್ಬಂಧ ಮುನ್ನೆಚ್ಚರಿಕೆಯ ಭಾಗವಾಗಿ ಈ ವರ್ಷ ಸೆಪ್ಟೆಂಬರ್ ಅಂತ್ಯದವರೆಗೆ ಜಾರಿಯಲ್ಲಿರಲಿದೆ.

ಪ್ರವಾಸಿಗರು ಸಮುದ್ರದಲ್ಲಿ ತೋಪಾಟಿ, ಈಜು ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ, ಸುಮಾರು 1 ಕಿ.ಮೀ ಉದ್ದದ ಕಡಲ ತೀರದಲ್ಲಿ 10 ಅಡಿ ಎತ್ತರದ ತಡೆಬೇಲಿಯನ್ನು ಫಿಶ್‌ನೆಟ್ ಬಳಸಿ ನಿರ್ಮಿಸಲಾಗಿದೆ. ಅಲ್ಲದೆ ಕೆಂಪು ಧ್ವಜಗಳು ಹಾಗೂ ಕನ್ನಡ ಮತ್ತು ಆಂಗ್ಲ ಎಚ್ಚರಿಕೆ ಫಲಕಗಳು ಬೀಚ್‌ನಲ್ಲಿ ಎಲ್ಲೆಡೆಯಲ್ಲೂ ಅಳವಡಿಸಲಾಗಿವೆ.

ಸುರಕ್ಷಿತ ವಾತಾವರಣ ಒದಗಿಸುವ ನಿಟ್ಟಿನಲ್ಲಿ, 5 ಮಂದಿ ಜೀವರಕ್ಷಕರು, 2 ಪ್ರವಾಸಿ ಮಿತ್ರರು ಹಾಗೂ 3 ಕರಾವಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಳೆಗಾಲದ ಸಮಯದಲ್ಲಿ ಪ್ರವಾಸೋದ್ಯಮ ಇಲಾಖೆಯು ಹೆಚ್ಚುವರಿ ಭದ್ರತಾ ಸಿಬ್ಬಂದಿ ಹಾಗೂ ಅಗತ್ಯ ರಕ್ಷಣಾ ಉಪಕರಣಗಳನ್ನು ಕೂಡ ಬಳಸುತ್ತಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಆಧರಿಸಿ, ಸೆಪ್ಟೆಂಬರ್ ಆರಂಭದಲ್ಲಿ ತಡೆಬೇಲಿಯನ್ನು ತೆಗೆಯಲಾಗುವುದು ಎಂದು ಪ್ರವಾಸೋದ್ಯಮ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.