
ಹಾಸನ : ಹಾಸನದ ಮೊಸಳೆಹೊಸಳ್ಳಿ ಬಳಿ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಗುಂಪಿನ ಮೇಲೆ ಅತಿ ವೇಗದಿಂದ ಬಂದ ಟ್ರಕ್ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.