spot_img

ಕಾರ್ಕಳದಲ್ಲಿ ಶೌರ್ಯ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ಯಶಸ್ವಿ

Date:

spot_img

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಾರ್ಕಳ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಕಳ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ರಾಜಪುರ ಸಭಾಭವನ ಜೋಡು ರಸ್ತೆ ಕಾರ್ಕಳದಲ್ಲಿ ನಡೆಸಲಾಯಿತು.

ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ಕಡಾರಿ ರವೀಂದ್ರ ಪ್ರಭು, ಅಧ್ಯಕ್ಷರು ರಾಜಪುರ ಸಾರಸ್ವತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಕಾರ್ಕಳರವರು ದೀಪ ಬೆಳಗಿಸಿ ಕಳೆದ 5 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶೌರ್ಯ ಸ್ವಯಂ ಸೇವಕರಿಗೆ ಶುಭ ಹಾರೈಸಿ ಕಾರ್ಕಳ ತಾಲೂಕಿನ ಈ ಶೌರ್ಯ ಘಟಕವು ಮೂರು ವರ್ಷದಿಂದ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಿದ್ದು ಮುಂದಿನ ದಿನದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಆಗಲೆಂದು ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹೆಗ್ಡೆ ವಹಿಸಿ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿ ಈ ತರಬೇತಿಯನ್ನು ಉತ್ತಮ ರೀತಿಯಲ್ಲಿ ಪಡೆದುಕೊಂಡು ವಿಪತ್ತು ಬಂದಾಗ ಕಾರ್ಯರೋಪಕ್ಕೆ ತರುವ ಹಾಗೆ ಮಾಹಿತಿ ನೀಡಿದರು

ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿಗಳಾದ ಶ್ರೀ ಜೈವಂತ್ ಪಟಗಾರರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಕಿಶೋರ್ ಕುಮಾರ್ ಯೋಜನಾಧಿಕಾರಿಯವರು,ಕಾರ್ಕಳ ತಾಲೂಕು ಸಮಿತಿಯ ಮಾಸ್ಟರ್ ಸದಾನಂದ ಸಾಲ್ಯಾನ್, ಮಾಸ್ಟರ್ ನವೀನ್ ರವರು ಉಪಸ್ಥಿತರಿದ್ದರು.

ತರಬೇತಿ ಕಾರ್ಯಗಾರದಲ್ಲಿ ಕಾರ್ಕಳ ತಾಲೂಕಿನ ಶೌರ್ಯ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಭಾಗವಹಿಸಿದ್ದರು. ಕಾರ್ಕಳ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಶ್ರೀ ಬಾಲಕೃಷ್ಣ ಹಿರಿಂಜ ಸ್ವಾಗತಿಸಿ, ಮೇಲ್ವಿಚಾರಕರಾದ ಶ್ರೀಮತಿ ಗೀತಾ ನಿರೂಪಿಸಿ, ಗಿರೀಶ್ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚಾಮರಾಜನಗರದಲ್ಲಿ ದುರಂತ: ಹಣ್ಣು ಎಂದು ವಿಷದ ಕಾಯಿ ತಿಂದ 12 ಮಕ್ಕಳು ಆಸ್ಪತ್ರೆಗೆ ದಾಖಲು!

ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದಿದ್ದರಿಂದ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಸೌದಿ ಅರೇಬಿಯಾದಲ್ಲಿ ಒಂದೇ ದಿನ 8 ಜನರಿಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಒಂದೇ ದಿನದಲ್ಲಿ ನೀಡಿದ ಅತಿ ಹೆಚ್ಚು ಶಿಕ್ಷೆಯಾಗಿದೆ.

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ತಾಂತ್ರಿಕ ದೋಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕೋರ್ಟ್ ತೀರ್ಪಿಗೆ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹11.5 ಲಕ್ಷ ದಂಡ ವಿಧಿಸಿದ ಬೆನ್ನಲ್ಲೇ, ಈ ತೀರ್ಪಿನ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.