ತುಮಕೂರು: ಒಟಿಪಿ ಹೇಳದಿದ್ದರೂ ನಿವೃತ್ತ ನೌಕರನ ಖಾತೆಯಿಂದ ₹17 ಲಕ್ಷ ಮಾಯ; ಹೊಸ ಮಾದರಿಯ ಸೈಬರ್‌ ವಂಚನೆ!

Date:

spot_img
cyber

ತುಮಕೂರು: ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ತುಮಕೂರಿನಲ್ಲಿ ನಿವೃತ್ತ ರೇಷ್ಮೆ ಇಲಾಖೆ ನೌಕರರೊಬ್ಬರು ಇದಕ್ಕೆ ಬಲಿಯಾಗಿದ್ದಾರೆ. ಯಾವುದೇ ಒಟಿಪಿ (OTP) ಹೇಳದಿದ್ದರೂ, ಅಥವಾ ಯಾರೊಂದಿಗೂ ಬ್ಯಾಂಕ್ ಖಾತೆಯ ವಿವರ ಹಂಚಿಕೊಳ್ಳದಿದ್ದರೂ, ಅವರ ಖಾತೆಯಿಂದ ಬರೋಬ್ಬರಿ ₹17 ಲಕ್ಷ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ.

ಸೈಬರ್ ವಂಚನೆಗೊಳಗಾದ ನಿವೃತ್ತ ನೌಕರನ ಹೆಸರು ಸಿ.ಇ. ನಾಗರಾಜು. ಜುಲೈ 31ರ ಮಧ್ಯರಾತ್ರಿ 12.17ರಿಂದ 1 ಗಂಟೆಯವರೆಗೆ ಅವರ ಮೊಬೈಲ್‌ಗೆ ಹಣ ವರ್ಗಾವಣೆಯ ಕುರಿತು ನಿರಂತರವಾಗಿ ಮೆಸೇಜ್‌ಗಳು ಬರಲಾರಂಭಿಸಿವೆ. ನಿದ್ದೆಯಿಂದ ಎಚ್ಚರಗೊಂಡು ಮೊಬೈಲ್ ಪರಿಶೀಲಿಸಿದಾಗ, ತಮ್ಮ ಖಾತೆಯಿಂದ ದೊಡ್ಡ ಮೊತ್ತದ ಹಣ ಮಾಯವಾಗಿರುವುದು ಅವರ ಗಮನಕ್ಕೆ ಬಂದಿದೆ.

ವಂಚಕರು ನಾಗರಾಜು ಅವರ ಖಾತೆಯಿಂದ ₹5 ಲಕ್ಷ, ₹50 ಸಾವಿರ, ₹98 ಸಾವಿರ ಹೀಗೆ ಸುಮಾರು 6 ಬಾರಿ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ. ತಕ್ಷಣವೇ ಬ್ಯಾಂಕಿನ ಸಹಾಯವಾಣಿಯನ್ನು ಸಂಪರ್ಕಿಸಿ ಮಾಹಿತಿ ಪಡೆದ ನಾಗರಾಜು, ವಂಚಕರನ್ನು ಪತ್ತೆ ಹಚ್ಚಿ, ಹಣ ವಾಪಸ್‌ ಕೊಡಿಸುವಂತೆ ಕೋರಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಲಿಂಕ್ ಕಳುಹಿಸಿ ವಂಚಿಸುವುದು, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸುವುದು, ಪಾರ್ಟ್ ಟೈಮ್ ಕೆಲಸದ ಆಮಿಷವೊಡ್ಡುವಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದವು. ಆದರೆ ಈಗ ಯಾವುದೇ ಒಟಿಪಿ ಬರದಿದ್ದರೂ ಅಥವಾ ಅದನ್ನು ಹಂಚಿಕೊಳ್ಳದಿದ್ದರೂ ಹಣ ಕಡಿತಗೊಳ್ಳುತ್ತಿರುವ ಈ ಹೊಸ ಮಾದರಿಯ ವಂಚನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.