ಎಕೆಎಂಎಸ್ ಬಸ್ ಮಾಲೀಕ ಸೈಫ್ ಹತ್ಯೆ ಪ್ರಕರಣ 3 ಆರೋಪಿಗಳು ಪೊಲೀಸ್ ಬಲೆಗೆ

Date:

spot_img

ಉಡುಪಿ: ಮಲ್ಪೆ ಕೊಡವೂರು ಪ್ರದೇಶದ ಸಾಲ್ಮರದಲ್ಲಿ ನಡೆದಿರುವ ಎಕೆಎಂಎಸ್ (AKMS) ಖಾಸಗಿ ಬಸ್ ಸಂಸ್ಥೆಯ ಮಾಲೀಕ ಸೈಫ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಿಷನ್ ಕಾಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳದ ಅಬ್ದುಲ್ ಶುಕುರ್ (43) ಬಂಧಿತ ಆರೋಪಿಗಳು. ಸೈಫ್ ಅವರ ಬಸ್ ಕಂಪನಿಯಲ್ಲೇ ಈ ಮೂವರು ಕೆಲಸ ಮಾಡುತ್ತಿದ್ದರು ಎಂಬ ಪ್ರಾಥಮಿಕ ಮಾಹಿತಿಯಿದೆ. ಈ ಕೃತ್ಯದ ಹಿಂದಿನ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

ಈ ಮಹತ್ವದ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ, ಮಲ್ಪೆ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ತೀವ್ರ ಕಾರ್ಯಾಚರಣೆಯ ನಂತರ ತಂಡವು ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೊಲೆಯ ಹಿಂದಿರುವ ಪೂರ್ಣ ಜಾಲ ಮತ್ತು ಯಾವುದೇ ಇತರ ವ್ಯಕ್ತಿಗಳ ಪಾತ್ರವಿದೆಯೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆಯನ್ನು ಮುಂದುವರೆಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.