
ಉಡುಪಿ: ಅಂಬಾಗಿಲು ಜಂಕ್ಷನ್ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರಂತ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಉಡುಪಿ, ಪುತ್ತೂರಿನ ಸುಬ್ರಹ್ಮಣ್ಯ ನಗರ ನಿವಾಸಿ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ಆಗಮಿಸುತ್ತಿದ್ದ ಖಾಸಗಿ ಬಸ್‌ಗೆ, ಕಲ್ಸಂಕ-ಅಂಬಾಗಿಲು ಮಾರ್ಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬೈಕ್ ಸವಾರ ರವಿ ಪೂಜಾರಿ ಅವರು ಅಂಬಾಗಿಲು ಜಂಕ್ಷನ್‌ನಲ್ಲಿ ಸುಬ್ರಹ್ಮಣ್ಯ ನಗರ ಕಡೆಗೆ ತಿರುವು ಪಡೆಯುತ್ತಿದ್ದಾಗ ಎದುರಿನಿಂದ ಬಂದ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ರವಿ ಪೂಜಾರಿ ಅವರು ರಸ್ತೆಗೆ ಬಿದ್ದು ಬಸ್‌ನ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾದ ಕಾರಣ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.



































