
ಉಡುಪಿ: ನಗರದ ಗುಂಡಿಬೈಲು ಪ್ರದೇಶದಲ್ಲಿರುವ ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ ಅಧಿಕ ಚಿನ್ನದ ಗಟ್ಟಿಯನ್ನು ಕಳ್ಳತನ ಮಾಡಿರುವ ಭಾರೀ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆರ್ಯ ಗೋಲ್ಡ್‌ನ ಮಾಲೀಕ ಅಜಯ್ ಜಾಧವ ಎಂಬವರ ಗುಂಡಿಬೈಲಿನ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ ಅಧಿಕ ಚಿನ್ನದ ಗಟ್ಟಿಯನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳ್ಳತನದ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.
































