spot_img

ಡಾ! ಬಿ.ಆರ್. ಅಂಬೇಡ್ಕರ್ ವಿಚಾರಧಾರೆ, ಜೀವನಾದರ್ಶಗಳ ಪಾಲನೆ ಇಂದಿನ ಅಗತ್ಯತೆ : ಕಿಶೋರ್ ಕುಮಾರ್ ಕುಂದಾಪುರ

Date:

ಇಂದು ಗ್ರಾಮ ಪಂಚಾಯತ್ ನಿಂದ ಸಂಸತ್ ವರೆಗಿನ ಚುನಾವಣೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಂತಹ ದೀಮಂತ ನಾಯಕ ಡಾ! ಬಿ.ಆರ್. ಅಂಬೇಡ್ಕರ್. ಅವರ ಉದಾತ್ತ ವಿಚಾರಧಾರೆಗಳು ಹಾಗೂ ಜೀವನಾದರ್ಶಗಳ ಪಾಲನೆ ಇಂದಿನ ಅಗತ್ಯತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ! ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಡಾ! ಅಂಬೇಡ್ಕರ್ ಅವರ ಬಗ್ಗೆ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್, ಡಾ! ಅಂಬೇಡ್ಕರ್ ಅವರನ್ನು ಹೇಗೆ ನಡೆಸಿಕೊಂಡಿದೆ ಹಾಗೂ ಚುನಾವಣೆಗೆ ಸ್ಪರ್ಧಿಸಿದಾಗ ಅವರನ್ನು ಯಾವ ರೀತಿಯಲ್ಲಿ ಸೋಲಿಸಲು ಕಾರಣವಾಗಿದೆ ಎಂಬುದು ಜಗಜ್ಜಾಹೀರಾಗಿದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳನ್ನಾಗಿ ಅಭಿವೃದ್ಧಿಪಡಿಸುವ ಮೂಲಕ ಡಾ! ಬಿ.ಆರ್. ಅಂಬೇಡ್ಕರ್ ಅವರಿಗೆ ನೈಜ ಗೌರವವನ್ನು ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಯುವ ಚಿಂತಕ ಸಂತೋಷ್ ನಂಬಿಯಾರ್ ಪಡುಬಿದ್ರಿ ಅವರು ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಸಾಮಾನ್ಯ ಸಾಧನೆ, ಅವರು ದೇಶಕ್ಕೆ ನೀಡಿದ ಕೊಡುಗೆ ಹಾಗೂ ಜೀವನಾದರ್ಶಗಳ ಕುರಿತು ಉಪನ್ಯಾಸವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಎಸ್.ಸಿ. ಮೋರ್ಚಾ ಪ್ರಮುಖರಾದ ಹಿರಿಯಣ್ಣ, ಸದಾನಂದ ಕೈಪುಂಜಾಲು, ಅಜಿತ್ ಕುಮಾರ್, ಪಾರ್ಥಸಾರಥಿ, ಅಭಿಜಿತ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.