
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉದ್ಯಾವರ ಸೇತುವೆ ಮೇಲೆ ಡಿವೈಡರ್‌ಗೆ ಡಿಕ್ಕಿಯಾಗಿ ಮಗುಚಿ ಬಿದ್ದ ದುರಂತ ಇಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಮಹಿಳೆಯೊಬ್ಬರು ಮತ್ತು ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಪಾರಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತರಿಸಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.