ಮಂಜುನಾಥ ಭಂಡಾರಿ ಗ್ರಾಮ ಪಂಚಾಯತ್ ಭೇಟಿ ಕೇವಲ ಚುನಾವಣಾ ಗಿಮಿಕ್ : ದಿನಕರ ಬಾಬು

Date:

spot_img
Dinakara Babu

ಉಡುಪಿ : ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಭೆ ನಡೆಸುತ್ತಿರುವುದು ಕೇವಲ ಚುನಾವಣಾ ಗಿಮಿಕ್ ಅಲ್ಲದೆ ಮತ್ತೇನು ಅಲ್ಲ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.

ಕಳೆದ ಎರಡೂವರೆ ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಿ ಪಂಚಾಯತ್ ರಾಜ್ ವ್ಯವಸ್ಥೆಗೆ ಬಲ ತುಂಬಬೇಕಾದ ಸರಕಾರ ನಿರ್ಲಕ್ಷ್ಯ ವಹಿಸಿದೆ. ಮೂಲಭೂತ ಸೌಕರ್ಯಗಳ ಕೊರತೆ, ರಸ್ತೆಗಳ ದುರಸ್ತಿ, ಮರಳು, ಕೆಂಪು ಕಲ್ಲು ಸಮಸ್ಯೆ, ವಸತಿ ಮಂಜೂರಾತಿ, ಪಡಿತರ ಚೀಟಿ, ಆರೋಗ್ಯ ಸೇವೆ ಸೇರಿದಂತೆ ಜನಸಾಮಾನ್ಯರ ಕಷ್ಟಗಳಿಗೆ ಸರಕಾರದ ಯಾವುದೇ ಸ್ಪಂದನೆ ಇಲ್ಲ.

ಗ್ರಾಮೀಣ ಭಾಗದಲ್ಲಿ ಏಕ ವಿನ್ಯಾಸ, 9 & 11 ಮಂಜೂರಾತಿಗೆ ಕಠಿಣ ಕಾನೂನು ರಚನೆ, ಮನೆ ನಿರ್ಮಾಣ ಪರವಾನಿಗೆಗೆ ಪರದಾಟ, ಸರಕಾರಿ ಬಸ್ ಗಳಿಗೆ ಬೇಡಿಕೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಗೆ ಕಿವಿಗೊಡದ ಸರಕಾರದ ನಡವಳಿಕೆಯ ಬಗ್ಗೆ ಮಂಜುನಾಥ ಭಂಡಾರಿ ಅವರು ಮಾತನಾಡಲಿ.

ಉಡುಪಿ ಜಿಲ್ಲೆಗೆ ಅನುದಾನ ಹಾಗೂ ಸೌಕರ್ಯ ನೀಡುವಲ್ಲಿ ಮಲತಾಯಿ ಧೋರಣೆಯೊಂದಿಗೆ ತಾರತಮ್ಯ ಎಸಗುತ್ತಿರುವ ಹಾಗೂ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ಗುಂಗಿನಲ್ಲಿರುವ ರಾಜ್ಯ ಸರ್ಕಾರದ ಕಾರ್ಯ ವೈಖರಿಯ ಬಗ್ಗೆ ವಿಧಾನ ಪರಿಷತ್ ಸದಸ್ಯರು ಉತ್ತರಿಸಲಿ. ಕಳೆದ ಎರಡೂವರೆ ವರ್ಷಗಳಲ್ಲಿ ಉಡುಪಿ ಜಿಲ್ಲೆಗೆ ನೀಡಿದ ಅನುದಾನಗಳ ಪಟ್ಟಿಯೊಂದಿಗೆ ಭಂಡಾರಿಯವರು ಚರ್ಚಿಸಲಿ.

ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಭೆ ನಡೆಸುತ್ತಿರುವುದು ಮುಂಬರುವ ಚುನಾವಣೆಗಳನ್ನು ಗಮದಲ್ಲಿಟ್ಟುಕೊಂಡು ನಡೆಸುತ್ತಿರುವ ಕಾಟಾಚಾರದ ಸಭೆ ಎಂಬುದು ಉಡುಪಿ ಜಿಲ್ಲೆಯ ಪ್ರಜ್ಞಾವಂತ ನಾಗರಿಕರಿಗೆ ಅರಿವಿದ್ದು, ಇಂತಹ ಸಭೆಗಳಿಂದ ಜನ ಸಾಮಾನ್ಯರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ದಿನಕರ ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.