
ಉಡುಪಿ : ಪಕ್ಷದ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ, ವಾಗ್ಮಿ ಎಂ.ಕೆ. ವಿಜಯ ಕುಮಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪಕ್ಷದ ಬೆಳವಣಿಗೆಯ ಸಂದರ್ಭದಲ್ಲಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಅತ್ಯಂತ ಸಕ್ರಿಯವಾಗಿದ್ದುಕೊಂಡು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಭದ್ರ ನೆಲೆ ಇಲ್ಲದ ಕಾಲದಲ್ಲಿಯೂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷ ನಿಷ್ಠೆ ಮೆರೆದಿರುವ ಜೊತೆಗೆ ಸಹಸ್ರಾರು ನಿಷ್ಠಾವಂತ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದ್ದ ಎಮ್.ಕೆ. ವಿಜಯ ಕುಮಾರ್ ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.