ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ಪ್ರತಿಭಟನೆ – ‘ರಸ್ತೆ ಗುಂಡಿಗಳೊಂದಿಗೆ ಸೆಲ್ಫಿ’ ಅಭಿಯಾನ : ಕುತ್ಯಾರು ನವೀನ್ ಶೆಟ್ಟಿ

Date:

spot_img

ಉಡುಪಿ : ಜನರ ಜೀವನಾಡಿಯಂತಿರುವ ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ ‘ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ‘ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಫೋಟೋ ಹಂಚಿಕೊಳ್ಳುವ ಮೂಲಕ ಚಾಲನೆ ನೀಡಿದರು.

ಕೇವಲ ಸ್ವಯಂ ಘೋಷಿತ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಸ್ತೆಗಳ ಗುಂಡಿ ಮುಚ್ಚಲೂ ಹಣವಿಲ್ಲದೇ ನೈಜ ದಿವಾಳಿತನ ಪ್ರದರ್ಶಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ರಾಜ್ಯ ಸರಕಾರದ ಸುಪರ್ದಿಯಲ್ಲಿರುವ ಎಲ್ಲಾ ರಸ್ತೆಗಳು ಗುಂಡಿಗಳಿಂದ ತುಂಬಿ ತುಳುಕುತ್ತಿದ್ದರೂ ಮುಖ್ಯಮಂತ್ರಿಗಳ ಸಹಿತ ರಾಜ್ಯ ಸರಕಾರ ಈ ಬಗ್ಗೆ ತೀವ್ರ ನಿರ್ಲಕ್ಷ್ಯ ಧೋರಣೆ ಅನುಸರಿಸಿರುವುದು ಖಂಡನೀಯ ಎಂದು ಕುತ್ಯಾರು ತಿಳಿಸಿದ್ದಾರೆ.

ಕನಿಷ್ಠ ರಸ್ತೆಗಳ ಗುಂಡಿಗಳನ್ನು ಮುಚ್ಚಲೂ ರಾಜ್ಯ ಸರಕಾರ ಯಾವುದೇ ಅನುದಾನವನ್ನು ನೀಡದೇ ಇರುವ ಬಗ್ಗೆ ಕಾಂಗ್ರೆಸ್ ಶಾಸಕರೇ ಅನೇಕ ಸಂದರ್ಭಗಳಲ್ಲಿ ಬಹಿರಂಗವಾಗಿ ತಮ್ಮ ಅಸಹಾಯಕತೆಯನ್ನು ತೋರ್ಪಡಿಸಿರುವುದು ಜಗಜ್ಜಾಹೀರಾಗಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಸಾರ್ವಜನಿಕ ಹಿತ ದೃಷ್ಠಿಯಿಂದ ಸೆ.16ರಂದು ‘ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಈ ಅಭಿಯಾನದಲ್ಲಿ ಭಾಗವಹಿಸಿ, ರಾಜ್ಯ ಸರಕಾರದ ಪರಿಮಿತಿಗೆ ಒಳಪಟ್ಟಿರುವ ರಸ್ತೆಗಳಲ್ಲಿರುವ ಗುಂಡಿಗಳ ಜೊತೆಗೆ ಸೆಲ್ಫಿ ಫೋಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕಣ್ಣು ತೆರೆಸಿ ಎಚ್ಚರಿಸುವ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇನ್ನಾದರೂ ರಾಜ್ಯ ಸರಕಾರ ಎಚ್ಚೆತ್ತುಕೊಂಡು ತಕ್ಷಣ ಉಡುಪಿ ಜಿಲ್ಲೆಯಾದ್ಯಂತ ರಾಜ್ಯ ಸರಕಾರದ ಪರಿಮಿತಿಗೆ ಸಂಬಂಧಿಸಿರುವ ವಿವಿಧ ರಸ್ತೆಗಳಲ್ಲಿರುವ ಹೊಂಡಗಳನ್ನು ಮುಚ್ಚಲು ತುರ್ತು ಕ್ರಮವನ್ನು ವಹಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.