spot_img

ಅಕ್ರಮ ಪಾಕಿಸ್ತಾನಿ ನುಸುಳುಕೋರರ ಗಡಿಪಾರಿಗೆ ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ ಸಲ್ಲಿಕೆ

Date:

ಏ.22ರಂದು ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ನೆರವಿನಿಂದ 26 ಅಮಾಯಕ ಭಾರತೀಯ ಪ್ರಜೆಗಳನ್ನು ಉಗ್ರರು ಧರ್ಮವನ್ನು ಕೇಳಿ ತಿಳಿದು ಗುಂಡಿಕ್ಕಿ ಹತ್ಯೆಗೈದಿರುವ ದಾರುಣ ಘಟನೆಯ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರಕಾರ ಈಗಾಗಲೇ ಆದೇಶ ಹೊರಡಿಸಿರುವಂತೆ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಶ್ರೀಘ್ರವಾಗಿ ಪತ್ತೆ ಹಚ್ಚಿ ಅವರನ್ನು ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡುವ ಬಗ್ಗೆ ಆದ್ಯತೆ ಮೇರೆಗೆ ತುರ್ತು ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತು.

ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐ.ಎಸ್.ಐ. ನೆರವಿನಿಂದ ಪಾಕಿಸ್ತಾನ ಸೇನೆ ಇಡೀ ದಾಳಿಯ ಯೋಜನೆಯನ್ನು ರೂಪಿಸಿ ಇಂತಹ ಬರ್ಬರ ಹತ್ಯಾಕಾಂಡವನ್ನು ನಡೆಸಿರುವುದನ್ನು ಅರಗಿಸಿಕೊಳ್ಳಲಾಗದೆ ಇಡೀ ದೇಶ ಅತ್ಯಂತ ದೊಡ್ಡ ಆಘಾತಕ್ಕೊಳಗಾಗಿದೆ ಹಾಗೂ ಜಗತ್ತಿನ ಎಲ್ಲಾ ಶಕ್ತಿಶಾಲಿ ರಾಷ್ಟ್ರಗಳು ಭಾರತದ ಜೊತೆ ನಿಲ್ಲುವುದಾಗಿ ಘೋಷಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕುಕೃತ್ಯಕ್ಕೆ ಕಾರಣರಾದವರು ಹಾಗೂ ಅವರಿಗೆ ಪ್ರೇರಣೆ ನೀಡಿದವರನ್ನು ನಾಶಗೊಳಿಸುವ ಮತ್ತು ಭಯೋತ್ಪಾದನೆಯ ಮುಲೋತ್ಪಾಟನೆಯ ಪ್ರತಿಜ್ಞೆಗೈದು ಭಾರತೀಯ ಸೇನಾ ಪಡೆಗಳಿಗೆ ಸ್ವತಂತ್ರ ಕಾರ್ಯನಿರ್ವಹಣೆಗೆ ಸಂಪೂರ್ಣ ಅಧಿಕಾರ ನೀಡಿರುವ ಸನ್ನಿವೇಶದಲ್ಲಿ ಇಡೀ ದೇಶ ಉಗ್ರ ಧಮನ ಕಾರ್ಯಕ್ಕೆ ಬೆಂಬಲ ನೀಡಿದೆ.

ಈ ದುರ್ಘಟನೆಯ ಪರಿಣಾಮವಾಗಿ ಕೇಂದ್ರ ಸರ್ಕಾರ ಸಿಂಧೂ ನದಿ ನೀರಿನ ಒಪ್ಪಂದಕ್ಕೆ ಇತಿಶ್ರೀ ಹಾಡುವ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ಮಾತ್ರವಲ್ಲದೆ ಪಾಕಿಸ್ತಾನದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿ, ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಬರುವ ವೀಸಾವನ್ನು ನಿಲ್ಲಿಸಿದೆ ಹಾಗೂ ನಿಯಮಿತ ಸಮಯದಲ್ಲಿ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಹಿಂತಿರುಗುವಂತೆ ಕಟ್ಟಾಜ್ಞೆಯನ್ನು ಹೊರಡಿಸಿದೆ. ಗೃಹ ಸಚಿವಾಲಯದ ಆಜ್ಞಾ ಪತ್ರ ಸಂಖ್ಯೆ : 25022/28/2025/F.1, 25.4.2025ರ ಅನ್ವಯ ಹಾಗೂ ಸೆಕ್ಷನ್ 3(1) 1946ರ ವಿದೇಶಿಗರ ಕಾಯ್ದೆಗೆ ವಿಶೇಷ ಅಧಿಕಾರ ನೀಡಿ (ದೀರ್ಘಾವದಿ ಹಾಗೂ ರಾಜತಾಂತ್ರಿಕ ಮತ್ತು ಅಧೀಕೃತ ವೀಸಾಗಳನ್ನು ಹೊರತುಪಡಿಸಿ) ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ವಿತರಣೆಯನ್ನು ಅಮಾನತ್ತಿನಲ್ಲಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿಗಳು, ಅಧಿಕೃತ ದಾಖಲಾತಿಗಳಿಲ್ಲದೇ ರದ್ದಾಗಿರುವ ವೀಸಾಗಳು ಹಾಗೂ ಅಮಾನತಿನಲ್ಲಿರುವ ವೀಸಾಗಳನ್ನು ಹೊಂದಿಕೊಂಡು ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅಂತಹ ವ್ಯಕ್ತಿಗಳನ್ನು ಪಟ್ಟಿಮಾಡಿ ಯಾವುದೇ ವಿಳಂಬವಿಲ್ಲದೇ ಕೂಡಲೇ ಎಲ್ಲಾ ಕಾನೂನುಬದ್ಧವಾದ ಕ್ರಮಗಳನ್ನು ಕೈಗೊಂಡು ಸ್ಥಳೀಯಾಡಳಿತ ವ್ಯವಸ್ಥೆಯು ಶೀಘ್ರ ಹಾಗೂ ನಿರ್ಣಾಯಕ ಕಾರ್ಯನಿರ್ವಹಿಸುವ ಜೊತೆಗೆ ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸಿ, ಜನರ ವಿಶ್ವಾಸವನ್ನು ಬಲಗೊಳಿಸಿ, ಸಮಯಾನುಸಾರ ದಕ್ಷ ಸುರಕ್ಷತಾ ವ್ಯವಸ್ಥೆಯನ್ನು ನಿರ್ವಹಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯರಾದ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪೆರಣoಕಿಲ ಶ್ರೀಶ ನಾಯಕ್, ಜಯರಾಮ್ ಸಾಲ್ಯಾನ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ರೈತ ಮೋರ್ಚಾ ಕೋಶಾಧಿಕಾರಿ ಕರುಣಾಕರ ಶೆಟ್ಟಿ, ವ್ಯಾಪಾರಿ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ವಿವೇಕ್ ಪೈ, ಮಂಡಲ ಅಧ್ಯಕ್ಷರಾದ ದಿನೇಶ್ ಅಮೀನ್ ಉಡುಪಿ ನಗರ, ಜಿತೇಂದ್ರ ಶೆಟ್ಟಿ ಕಾಪು, ರಾಜೀವ್ ಕುಲಾಲ್ ಉಡುಪಿ ಗ್ರಾಮಾಂತರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಶೆಟ್ಟಿ ಉಡುಪಿ, ಸಚಿನ್ ಪೂಜಾರಿ ಬ್ರಹ್ಮಾವರ, ಗೋಪಾಲಕೃಷ್ಣ ರಾವ್ ಮಟ್ಟು, ಶರಣ್ ಕುಮಾರ್ ಮಟ್ಟು, ಸತೀಶ್ ಪೂಜಾರಿ ಕುಂದಾಪುರ, ಸುಧೀರ್ ಕೆ.ಎಸ್. ಕುಂದಾಪುರ, ಜಿಲ್ಲಾ ಹಿರಿಯ ನಾಗರಿಕರ ಪ್ರಕೋಷ್ಠದ ಸಂಚಾಲಕ ನಾರಾಯಣ ಮೂರ್ತಿ, ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ಕೆ.ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪ್ರವೀಣ್ ಕುಮಾರ್ ಗುರ್ಮೆ ಸಹಿತ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿರ್ವದ ಪಾಪನಾಶಿನಿ ನದಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಹಿಟಾಚಿ, ಟಿಪ್ಪರ್ ವಶಕ್ಕೆ

ಪಾಪನಾಶಿನಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಶಿರ್ವ ಪೊಲೀಸರು ದಾಳಿ ನಡೆಸಿ, ಹಿಟಾಚಿ ಯಂತ್ರ ಮತ್ತು ಎರಡು ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).