
ಉಡುಪಿ: ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕ ಸಭೆಯನ್ನು ಉಡುಪಿ ಅಂಬಲ್ಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಆನಂದ ಸುವರ್ಣರವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿ ಪೂಜ್ಯರ ಕಾರ್ಯಕ್ರಮಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಸಂಘಟನಾ ಮಾಜಿ ಅಧ್ಯಕ್ಷರಾದ ಶ್ರೀ ದೇವದಾಸ್ ಹೆಬ್ಬಾರ್ ಹಾಗೂ ಜಿಲ್ಲಾ ಸಂಘಟನಾ ಮಾಜಿ ಅಧ್ಯಕ್ಷರಾದ ಶ್ರೀ ನವೀನ್ ಅಮೀನ್ ಶುಭ ಹಾರೈಸಿದರು.

ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರ ಆಯ್ಕೆ
ಸರ್ವಾನುಮತದಿಂದ ನೂತನ ಜಿಲ್ಲಾ ಜನಜಾಗೃತಿ ವೇದಿಕೆ ಸಂಘಟನಾಧ್ಯಕ್ಷರಾಗಿ ಶ್ರೀ ನೀರೆ ಕೃಷ್ಣ ಶೆಟ್ಟಿರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನವಾಗಿ ಜಿಲ್ಲಾ ಸದಸ್ಯರಾಗಿ ಶ್ರೀಮತಿ ಸುಜಾತ ಸುವರ್ಣ ಶ್ರೀ.ಸತ್ಯೇಂದ್ರ ಪೈ ಸುಧಾಕರ ಕರ್ಕರ ಹಾಗೂ ವೃಷಭರಾಜ್ ಜೈನ್ ರವರನ್ನು ಜಿಲ್ಲಾ ಜನಜಾಗೃತಿ ವೇದಿಕೆಗೆ ಸೇರ್ಪಡೆಗೊಳಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯದರ್ಶಿ ಶ್ರೀ ನಾಗರಾಜ್ ಶೆಟ್ಟಿ ಗತ ಸಭೆಯ ವರದಿ ವಾಚಿಸಿದರು. ಉಡುಪಿ ಜಿಲ್ಲಾ ವ್ಯಾಪ್ತಿಯ ಕ್ಷೇತ್ರ ಯೋಜನಾಧಿಕಾರಿಗಳು ತಮ್ಮ ತಾಲೂಕಿನ ಜನಜಾಗೃತಿ ಸಾಧನಾ ವರದಿ ಮಂಡನೆ ಮಾಡಿದರು .
ಸಭೆಯಲ್ಲಿ 2025/26.. ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ವಿವರಿಸಿದರು.

ವಿಶ್ವ ತಂಬಾಕು ವಿರೋಧಿ ದಿನಾಚರಣೆ,ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ,ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಅನುಷ್ಠಾನ,ಮದ್ಯ ವರ್ಜನ ಶಿಬಿರದ ಬಗ್ಗೆ,ಗಾಂಧಿ ಜಯಂತಿ ಕಾರ್ಯಕ್ರಮ,ನವ ಜೀವನ ಪೋಷಕರ ತರಬೇತಿ,ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಕ್ರಮ , 2025/2026ನೇ ಸಾಲಿನ ಕ್ರಿಯಾ ಯೋಜನೆಯಂತೆ ಇತರ ವಿಷಯಗಳನ್ನು ಚರ್ಚಿಸಲಾಯಿತು.

ಉಡುಪಿ ಜಿಲ್ಲಾ ವೇದಿಕೆಗೆ ಸಂಬಂಧಪಟ್ಟ 7 ತಾಲೂಕು ವೇದಿಕೆಯ ತಾಲೂಕು ಸಂಘಟನಾ ಅಧ್ಯಕ್ಷರಾದ ನೀರೇ ಕೃಷ್ಣ ಶೆಟ್ಟಿ ಹೆಬ್ರಿ, ಉದಯ್ ಕುಮಾರ್ ಹೆಗ್ಡೆ ಕಾರ್ಕಳ, ಪ್ರಕಾಶ್ ಶೆಟ್ಟಿ ಬ್ರಹ್ಮಾವರ, ಸತ್ಯಾನಂದ್ ನಾಯಕ್ ಉಡುಪಿ, ದಯಾನಂದ ಹೆಜಮಾಡಿ ಕಾಪು, ಉಮೇಶ್ ಶೆಟ್ಟಿ ಶ್ಯಾನ್ ಕಟ್ ಕುಂದಾಪುರ, ಸುಧಾಕರ ಆಚಾರ್ಯ ಬೈಂದೂರು ಇವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಕ್ಷೇತ್ರದ ಬಗ್ಗೆ ಪೂಜ್ಯರ ಬಗ್ಗೆ ಅಪಪ್ರಚಾರವನ್ನು ಜಿಲ್ಲಾ ಜನಜಾಗೃತಿ ವೇದಿಕೆ ತೀವ್ರವಾಗಿ ಖಂಡಿಸಿ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು, 7 ತಾಲೂಕು ವೇದಿಕೆಯ ಕಾರ್ಯದರ್ಶಿಗಳು, MIS ಯೋಜನಾಧಿಕಾರಿ ಶ್ರೀಮತಿ ಸ್ವಪ್ನಾ, ಮೇಲ್ವಿಚಾರಕರಾದ ಶ್ರೀ ಕೃಷ್ಣಪ್ಪ, ನಿತೇಶ್ ಕೆ ಉಪಸ್ಥಿತರಿದ್ದರು. ಉಡುಪಿ ತಾಲೂಕು ಕಾರ್ಯದರ್ಶಿ ಶ್ರೀ ಸುರೇಂದ್ರ ನಾಯ್ಕ ಸ್ವಾಗತಿಸಿ, ಹೆಬ್ರಿ ತಾಲೂಕು ಕಾರ್ಯದರ್ಶಿ ಶ್ರೀಮತಿ ಲೀಲಾವತಿ ವಂದಿಸಿದರು.