

ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯ ಸಂತೋಷ್ ನಗರದಲ್ಲಿ ಮಂಗಳವಾರ (ಫೆಬ್ರವರಿ.11) ಗುಜುರಿ ಸಾಮಾನು ಸಂಗ್ರಹ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಾಸ್ತಾನಿನಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದು, ಸುತ್ತಮುತ್ತಲಿನ ಮನೆಗಳಿಗೆ ವ್ಯಾಪಿಸುವ ಸಾಧ್ಯತೆಯಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಗ್ನಿ ಅವಘಡಕ್ಕೆ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನಷ್ಟೇ ಸ್ಪಷ್ಟವಾಗಬೇಕಾಗಿದೆ.