
ಜನವರಿ 17 : ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪರಿಸರದಲ್ಲಿ ಯಾವುದೇ ಅಪಾಯವಾಗದಂತೆ ವ್ಯವಸ್ಥೆ ಮಾಡಲಾಗುತ್ತಿದೆ.
ಅಧಿಕಾರಿಗಳು ಸ್ಥಳದಲ್ಲಿ ಸುತ್ತುವರಿದಿದ್ದು, ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾ ವಹಿಸಿದ್ದಾರೆ. ಪರಿಸ್ಥಿತಿ ಕೈ ಮೀರದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಶೀಘ್ರವೇ ಹೆಚ್ಚಿನ ಮಾಹಿತಿ ಬರುವ ನಿರೀಕ್ಷೆ ಇದೆ.