ಉಡುಪಿ: ಆಭರಣ ಮಳಿಗೆಯ ಉದ್ಯೋಗಿ ಬಾವಿಗೆ ಹಾರಿ ಆತ್ಮಹತ್ಯೆ

Date:

spot_img

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಗರಡಿಮಜಲು ಎಂಬಲ್ಲಿ ಆಭರಣ ಮಳಿಗೆಯಲ್ಲಿ ಉದ್ಯೋಗಿಯಾಗಿದ್ದ ರಮೇಶ್ ಶೇರಿಗಾರ್ (38) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಎರಡು ದಿನಗಳ ಹಿಂದೆ ರಮೇಶ್ ಶೇರಿಗಾರ್ ನಾಪತ್ತೆಯಾಗಿದ್ದ ಬಗ್ಗೆ ದೂರು ದಾಖಲಾಗಿತ್ತು ಮತ್ತು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಕೊನೆಗೆ ಶವವು ಬಾವಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾನೂನು ಪ್ರಕ್ರಿಯೆ ಕೈಗೊಂಡಿರುತ್ತಾರೆ. ಕೊಳೆಯಲು ಪ್ರಾರಂಭಿಸಿದ್ದ ಶವವನ್ನು ಸ್ಥಳೀಯ ಸಮಾಜಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಈಶ್ವರ್ ಮಲ್ಪೆ ಬಾವಿಯಿಂದ ಹೊರತೆಗೆದಿದ್ದಾರೆ.

ಶವವನ್ನು ತಕ್ಷಣವೇ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆ ಸಂಬಂಧ ಇನ್ನಷ್ಟು ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.