ಉಡುಪಿ: ಕೆಳಪರ್ಕಳ ರಸ್ತೆ ದುರಸ್ತಿ ಕಾರ್ಯ ಸೆ. 15ರಿಂದ ಆರಂಭ: ಪರ್ಯಾಯ ಸಂಚಾರ ವ್ಯವಸ್ಥೆ

Date:

spot_img

ಉಡುಪಿ: ಮಣಿಪಾಲ-ಪರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಸಂಪೂರ್ಣ ಹದಗೆಟ್ಟಿರುವ ಕೆಳಪರ್ಕಳ ರಸ್ತೆಯ ಡಾಮರು ಕಾಮಗಾರಿಯು ಸೆಪ್ಟೆಂಬರ್ 15, ಸೋಮವಾರದಿಂದಲೇ ಆರಂಭವಾಗಲಿದೆ. ಈ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಯಶ್‌ಪಾಲ್ ಸುವರ್ಣ ಅವರು ರಾ.ಹೆದ್ದಾರಿ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಸದರು, ಕಾಮಗಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ವಿಶೇಷ ಅನುದಾನದೊಂದಿಗೆ ಕೈಗೊಂಡಿರುವ ಈ ಕಾಮಗಾರಿಯು ವೈಜ್ಞಾನಿಕ ರೀತಿಯಲ್ಲಿ ನಡೆಯಲಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ರಸ್ತೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗುವುದು ಎಂದು ತಿಳಿಸಲಾಗಿದ್ದು, ಈ ಕುರಿತು ಪೊಲೀಸ್ ಇಲಾಖೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಿದೆ. ರಸ್ತೆ ದುರಸ್ತಿ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸುವಂತೆ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.