spot_img

ಪರ್ಕಳದಲ್ಲಿ ₹3.5 ಕೋಟಿ ವೆಚ್ಚದ ನೂತನ ಮಾರುಕಟ್ಟೆ ಸಂಕೀರ್ಣಕ್ಕೆ ಶಿಲಾನ್ಯಾಸ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

Date:

ಉಡುಪಿ: ಉಡುಪಿ ನಗರಸಭೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಪರ್ಕಳ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು. ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅವರು ಸುಮಾರು ₹3.5 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಆಧುನಿಕ ಮಾರುಕಟ್ಟೆ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಈ ನೂತನ ಮಾರುಕಟ್ಟೆ ಸಂಕೀರ್ಣವು ತರಕಾರಿ ಮಾರುಕಟ್ಟೆ, ಮೀನು ಮಾರುಕಟ್ಟೆ, ಮಾಂಸದ ಅಂಗಡಿಗಳು, ನಿತ್ಯ ಮಾರುಕಟ್ಟೆ ಹಾಗೂ ವಿವಿಧ ಅಂಗಡಿ ಮಳಿಗೆಗಳನ್ನು ಒಳಗೊಂಡಿರಲಿದೆ ಎಂದು ತಿಳಿಸಿದರು. ಅಲ್ಲದೆ, ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ನಿರ್ಮಾಣಗೊಳ್ಳಲಿರುವ ಈ ಮಾರುಕಟ್ಟೆಯು ಪರ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನತೆಗೆ ಅತ್ಯಂತ ಉಪಯುಕ್ತವಾಗಲಿದೆ ಎಂದು ಅವರು ಭರವಸೆ ನೀಡಿದರು. ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಿಸುವ ಗುರಿ ಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ನಗರಸಭೆ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಮಂಜುನಾಥ ಮಣಿಪಾಲ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಅಶ್ವಿನಿ, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ಹಸಿ ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಎಚ್. ಸಾಲ್ಯಾನ್, ಮುಖಂಡರಾದ ಶ್ರೀ ದಿಲೀಪ್ ರಾಜ್ ಹೆಗ್ಡೆ, ಶ್ರೀ ದಿನೇಶ್ ಶೆಟ್ಟಿ, ಶ್ರೀ ದಿವಾಕರ ಶೆಟ್ಟಿ, ಶ್ರೀ ಪ್ರಕಾಶ್ ಶೆಟ್ಟಿ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀ ದುರ್ಗಾ ಪ್ರಸಾದ್, ಮೀನು ಮಾರಾಟಗಾರ ಮಹಿಳೆಯರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಮೋದ ಮುತಾಲಿಕ್: ‘ಪಾಕ್ ಜೊತೆಗಿನ ಕ್ರಿಕೆಟ್ ಪಂದ್ಯ ದೇಶಕ್ಕೆ ದ್ರೋಹ’

ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃತ್ಯದ ಆರೋಪಿ ಚಿನ್ನಯ್ಯ ಬುರುಡೆ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 16ಕ್ಕೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಬುರುಡೆಗೆ ಜಾಮೀನು ನಿರಾಕರಿಸುವಂತೆ ವಿಶೇಷ ತನಿಖಾ ದಳ (SIT) ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದೆ.

ದಿನ ವಿಶೇಷ – ಅಂತರರಾಷ್ಟ್ರೀಯ ಚಾಕೊಲೇಟ್ ದಿನ

ಅಂತರರಾಷ್ಟ್ರೀಯ ಚಾಕೊಲೇಟ್ ದಿನವು ಕೇವಲ ಒಂದು ಸಿಹಿತಿಂಡಿಯನ್ನು ತಿನ್ನುವ ದಿನವಲ್ಲ, ಬದಲಾಗಿ ಜೀವನದ ಸಣ್ಣ ಸುಖಗಳನ್ನು ಆಚರಿಸಿ

ಅಕ್ರಮ ನಾಡ ಬಂದೂಕಿನ ಆಕಸ್ಮಿಕ ಗುಂಡಿಗೆ ಹೊಸನಗರದ ವ್ಯಕ್ತಿ ಬಲಿ

ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ 47 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.