spot_img

ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸ್ವಾಗತಾರ್ಹ : ಕಿಶೋರ್ ಕುಮಾರ್ ಕುಂದಾಪುರ

Date:

ಉಡುಪಿ: ಪ್ರತಿಷ್ಠಿತ ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ಪರಿವರ್ತಿತವಾದಲ್ಲಿ ಉಡುಪಿ ನಗರದ ಸಹಿತ ನಗರಕ್ಕೆ ಹೊಂದಿಕೊಂಡಿರುವ ಹಲವಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದಂತಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಮೂಲತ: ಸಿಟಿ ಮುನ್ಸಿಪಲ್ ಕೌನ್ಸಿಲ್, ಪುರಸಭೆಯಾಗಿದ್ದ ಉಡುಪಿ ನಗರಸಭೆ 1996ರಲ್ಲಿ ಮಲ್ಪೆ (ಕೊಡವೂರು), ಪುತ್ತೂರು, ಶಿವಳ್ಳಿ, 76 ಬಡಗಬೆಟ್ಟು ಮತ್ತು ಹೆರ್ಗ ಗ್ರಾಮಗಳ ಸೇರ್ಪಡೆಯೊಂದಿಗೆ ನಗರಸಭೆಯ ಸ್ಥಾನಮಾನವನ್ನು ಪಡೆದಿದೆ. 2010ರಲ್ಲಿ 75ನೇ ವರ್ಷಾಚರಣೆಯನ್ನು ನಡೆಸಿರುವ ಉಡುಪಿ ನಗರಸಭೆಗೆ ಪ್ರಸಕ್ತ 90ನೇ ವರ್ಷ ತುಂಬುತ್ತಿರುವ ಸುಸಂದರ್ಭದಲ್ಲಿ ಮಹಾ ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪ ಪ್ರಗತಿಯಲ್ಲಿರುವುದು ಹರ್ಷದಾಯಕವಾಗಿದೆ. ಈಗಾಗಲೇ ಹಲವಾರು ವಿನೂತನ ಯೋಜನೆಗಳೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಉಡುಪಿ ನಗರಸಭೆಗೆ ಮಹಾ ನಗರಪಾಲಿಕೆಯ ಸ್ಥಾನಮಾನ ವರದಾನವಾಗಿ ಪರಿಣಮಿಸಲಿದೆ.

ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ರೂಪುಗೊಳ್ಳುವ ಪ್ರಕ್ರಿಯೆಯಿಂದ ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿಯಂತಹ ಯೋಜನೆಗಳು ಹಾಗೂ ಬ್ರಹತ್ ಮೊತ್ತದ ಅನುದಾನಗಳು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಪ್ರಕ್ರಿಯೆ ಅತಿ ಶೀಘ್ರವಾಗಿ ಕಾರ್ಯಗತಗೊಂಡು ಉಡುಪಿ ಮಹಾ ನಗರಪಾಲಿಕೆ ಅಸ್ತಿತ್ವಕ್ಕೆ ಬರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗುವಂತಾಗಲಿ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ