ಉಡುಪಿ: ನರ್ಸಿಂಗ್ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Date:

spot_img

ಮಣಿಪಾಲ: ವೈಯಕ್ತಿಕ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಕಡಬ ಮೂಲದ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ನಿವಾಸಿ ಲಾರೆನ್ಸ್ ಎಂಬವರ ಪುತ್ರಿ ಸ್ವೀಟಿ (18) ಮೃತಪಟ್ಟ ದುರ್ದೈವಿ. ಇವರು ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು ಹಾಗೂ ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು.

ಘಟನೆಯ ವಿವರ: ಕಳೆದ ಫೆಬ್ರವರಿ 25 ರಂದು ತರಗತಿಗಳು ಮುಗಿದ ನಂತರ ವಸತಿ ನಿಲಯಕ್ಕೆ ಮರಳಿದ್ದ ಸ್ವೀಟಿ, ಅಲ್ಲಿಯೇ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಕಾಲೇಜು ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಯುವತಿಯ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ (KMC) ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ವೈಯಕ್ತಿಕ ಕಾರಣಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.