
ಉಡುಪಿ ಜಿಲ್ಲಾ ಗೋಸಂರಕ್ಷಣಾ ಸಮಿತಿ ವತಿಯಿಂದ ಇಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಲಿದೆ.
ಗೋ ಮಾತೆಯ ಕೇಚ್ಚಲು ಕತ್ತರಿಸಿದ ದೌರ್ಜನ್ಯವನ್ನು ಖಂಡಿಸುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಸಭೆಗೆ ಸಾರ್ವಜನಿಕರು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಗಮಿಸಿ ಬೆಂಬಲ ವ್ಯಕ್ತಪಡಿಸುವಂತೆ ಸಂಘಟಕರು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಮುಖಂಡರು ಗೋಸಂರಕ್ಷಣೆ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.