
ಉಡುಪಿ: ಪರ್ಕಳ ಬಸ್ ನಿಲ್ದಾಣದ ಹಿಂಭಾಗದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ಜ.19 ರಂದು ದಾಳಿ ನಡೆಸಿ ಆರೋಪಿ ಶರಣಪ್ಪನನ್ನು ಬಂಧಿಸಿದ್ದಾರೆ. ಈ ವೇಳೆ ಅಕ್ರಮ ಲಾಭಕ್ಕಾಗಿ ಮಹಿಳೆಯರನ್ನು ಬಳಸಿ ಬಲವಂತವಾಗಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಮಣಿಪಾಲ ಪೊಲೀಸ್ ಇನ್ಸ್ ಪೆಕ್ಟರ್ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಮಹಿಳೆಯನ್ನು ರಕ್ಷಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.