
ಉಡುಪಿ: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಮತ್ತು ಆದ್ಯತಾ ರಹಿತ ಪಡಿತರ ಚೀಟಿಗೆ ಸಂಬಂಧಿಸಿದ ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಕುಟುಂಬ ಸದಸ್ಯರ ಸೇರ್ಪಡೆ, ಹೆಸರು ತೆಗೆಸುವಿಕೆ, ವಿಳಾಸ ಬದಲಾವಣೆಯಂತಹ ತಿದ್ದುಪಡಿ ಕಾರ್ಯಗಳನ್ನು ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ಮಾಡಬಹುದಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಮಾಹಿತಿ ನೀಡಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದ್ದಾರೆ.