
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಇದರ ಪರಮ ಪೂಜ್ಯ ಡಾ!ಡಿ.ವೀರೇಂದ್ರ ಹೆಗ್ಡೆಯವರ ಹಾಗೂ ಮಾತೃಶ್ರೀ ಹೇಮಾವತಿಯ್ಮರವರ ಶುಭಾಶೀರ್ವಾದಗಳೊಂದಿಗೆ ಹಿರಿಯಡಕ ವಲಯದ “ಕರ್ನಾಟಕ ಪಬ್ಲಿಕ್ ಸ್ಕೂಲ್” ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪರಿಸರ ಮಾಹಿತಿ” ಹಾಗೂ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಉಡುಪಿ ತಾಲೂಕು ಕೃಷಿ ಅಧಿಕಾರಿಯಾದ ಶ್ರೀ ಮಂಜುನಾಥರವರ ಪ್ರಾಸ್ತಾವಿಕ ಹಾಗೂ ನಿರೂಪಣೆಯೊಂದಿಗೆ ಪ್ರಾರಂಭಿಸಿದ ಈ ಕಾರ್ಯಕ್ರಮದಲ್ಲಿ ಹಿರಿಯಡಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜ್ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯಡಕ ವಲಯದ ಗ್ರಾಮಾಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕರವರು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇವತಿಯವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಗಸ್ತು ಅರಣ್ಯಾಧಿಕಾರಿಯವರಾದ ಶ್ರೀ ಕೇಶವ ಪೂಜಾರಿ ಎಂ. ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಿಗೆ ವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ತಿನ ಉಪಾಧ್ಯಕ್ಷರಾದ ಶ್ರೀ ಹರೀಶ್ ಸಾಲ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸುನೀಲ್ ಶೆಟ್ಟಿ, ಉಡುಪಿ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶ್ರೀ ಸುಬ್ರಹ್ಮಣ್ಯ ಭಟ್, ಶಾಲಾ ಸಹಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಗ್ರಾಮಾಭಿವೃದ್ಧಿಯ ಸೇವಾಪ್ರತಿನಿಧಿಯವರು ಭಾಗವಹಿಸಿದ್ದರು.