ಶೀರೂರು ಶ್ರೀಗಳ ಪರ್ಯಾಯ ಸಂಭ್ರಮ: ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು!

Date:

spot_img

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಇಂದು ಭಕ್ತಿಯ ಪರಾಕಾಷ್ಠೆ ಮೇಳೈಸಿದೆ. ಶೀರೂರು ಮಠದ 31ನೇ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಭಾನುವಾರ ಮುಂಜಾನೆ ಶಾಸ್ತ್ರೋಕ್ತವಾಗಿ ‘ಸರ್ವಜ್ಞ ಪೀಠ’ ಅಲಂಕರಿಸುವ ಮೂಲಕ ಮುಂದಿನ 2 ವರ್ಷಗಳ ಶ್ರೀಕೃಷ್ಣ ಪೂಜಾ ಅಧಿಕಾರವನ್ನು ವಹಿಸಿಕೊಂಡರು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ಈ ಪರ್ಯಾಯ ಮಹೋತ್ಸವವು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಯಿತು.

ಜನವರಿ 18ರ ಮುಂಜಾನೆ 1.15ಕ್ಕೆ ಕಾಪುವಿನ ಪವಿತ್ರ ದಂಡತೀರ್ಥದಲ್ಲಿ ಪುಣ್ಯಸ್ನಾನಗೈದ ಶ್ರೀಗಳು, ನಂತರ ಜೋಡುಕಟ್ಟೆಯಿಂದ ಆರಂಭವಾದ ಭವ್ಯ ಮೆರವಣಿಗೆಯಲ್ಲಿ ಸಾಗಿಬಂದರು. ಮುಂಜಾನೆ 5.15ರ ಸುಮಾರಿಗೆ ಕನಕನ ಕಿಂಡಿಯ ಮೂಲಕ ಕೃಷ್ಣದರ್ಶನ ಪಡೆದು, ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಿಕಟಪೂರ್ವ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀ ವೇದವರ್ಧನ ತೀರ್ಥರನ್ನು ಅಕ್ಷಯ ಪಾತ್ರೆ ನೀಡಿ ಸರ್ವಜ್ಞ ಪೀಠದಲ್ಲಿ ಕುಳ್ಳಿರಿಸಿದರು. ಪೀಠಾರೋಹಣಕ್ಕೂ ಮುನ್ನ ಶ್ರೀಗಳು ತಮ್ಮ ಮಾತೃಶ್ರೀಯವರ ಪಾದಪೂಜೆ ಮಾಡಿ ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು.

ರಾಜಾಂಗಣದಲ್ಲಿ ನಡೆದ ಪರ್ಯಾಯ ದರ್ಬಾರ್‌ನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಅಷ್ಟಮಠದ ಯತಿವರ್ಯರು ಪಾಲ್ಗೊಂಡು ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.